Advertisement
4:23 AM Friday 8-December 2023

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

08/02/2023

ಗೋಣಿಕೊಪ್ಪಲು ಫೆ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ.
      ಎರಡು ದಿನಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಪ್ರತಿಭೆಗಳಿಗೆ ತಮ್ಮ ಕಲಾ ಪ್ರೌಢಿಮೆಯನ್ನು ಪ್ರಸ್ತುತಪಡಿಸಲು ಅವಕಾಶವಿದೆ.
         ಆಸಕ್ತರು  ದಿನಾಂಕ 15.02.2023ರ ಒಳಗಾಗಿ ತಮ್ಮ ಕಲೆಯ ವಿಡಿಯೋವನ್ನು ವಾಟ್ಸಪ್ ಮೂಲಕ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬಹುದು ಎಂದು ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
  ಸ್ವಾಗತ ಸಮಿತಿ,
  16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ,
  ಕಾಮತ್ ನವಮಿ ಸಭಾಂಗಣ,
  ಗೋಣಿಕೊಪ್ಪಲು 571213
ಡಿ.ಚಂದನ.    9986939357
ಕೆ.ವಿ.ರಾಮಕೃಷ್ಣ     9902306833