ಮಡಿಕೇರಿ : ಫೆ.11 ರಂದು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

ಮಡಿಕೇರಿ ಫೆ.9 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಅಂಗವಾಗಿ ಫೆ.11ರಂದು ನಗರದ ಪೊಲೀಸ್ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಕೊಡಗು ಪತ್ರಕರ್ತರ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಕರ ಸಂಘ, ವಕೀಲರ ಸಂಘಗಳ ನಡುವೆ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿಯನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆ ವಹಿಸಲಿದ್ದು. ಸಂಘದ ಹಿರಿಯ ಸಲಹೆಗಾರ ಬಿ.ಜಿ ಅನಂತಶಯನ ಭಾಗವಹಿಸಲಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಗಡ ಕ್ರೀಡಾ ಸಮಿತಿಯ ಸಂಚಾಲಕ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
