Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
  • *ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಫೆಬ್ರವರಿ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.9 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು)ಯಡಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ. 2 ಲಕ್ಷ ಸಹಾಯಧನ ಹಾಗೂ ರೂ. 50 ಸಾವಿರ ನಿಗಮದಿಂದ ಶೇ. 4ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ಇರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆ ಆಗಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)ಯಡಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇತರ ಉಪಜಾತಿಗಳಿಗೆ ಸೇರಿದ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.
ವಿದ್ಯಾರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ಇರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆ ಆಗಬೇಕು.
ಈ ಯೋಜನೆಗಳಲ್ಲಿ ಅರ್ಜಿದಾರರು/ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್, 03 ರವರೆಗೆ ಸಲ್ಲಿಸಬಹುದು.
ಈ ಎರಡು ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು/ವಿದ್ಯಾರ್ಥಿಗಳು ಹಿಂದೆ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸವಿತಾ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಜಿದಾರರು ನಿಗಮದ ವೆಬ್ ಸೈಟ್ https://kssd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050773004/5, 8050370006, 7090400100, 7090400900 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.9 : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ…

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*

ಮಾರ್ಚ್ 8, 2026

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.