Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
  • *ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»‘ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ’ಕ್ಕೆ ಚಾಲನೆ : ಗುಡಿ ಮತ್ತು ಸಣ್ಣ ಕೈಗಾರಿಕೆಗೆ ಉತ್ತೇಜನ : ನಾಪಂಡ ರವಿ ಕಾಳಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ’ಕ್ಕೆ ಚಾಲನೆ : ಗುಡಿ ಮತ್ತು ಸಣ್ಣ ಕೈಗಾರಿಕೆಗೆ ಉತ್ತೇಜನ : ನಾಪಂಡ ರವಿ ಕಾಳಪ್ಪ

ಫೆಬ್ರವರಿ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.9 : ನಗರದ ಗಾಂಧಿ ಮೈದಾನದಲ್ಲಿ ಫೆ.15 ರವರೆಗೆ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರು ಗುರುವಾರ ಚಾಲನೆ ನೀಡಿದರು.
ಜವಳಿ ಅಭಿವೃದ್ಧಿ ಆಯುಕ್ತ್ತಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಹಕಾರದಲ್ಲಿ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ನಾಪಂಡ ರವಿಕಾಳಪ್ಪ ಅವರು ರಾಷ್ಟ್ರದಲ್ಲಿ ಹಿಂದಿನಿಂದಲೂ ಕೈಮಗ್ಗದಿಂದ ಉತ್ಪಾದಿಸಿದ ಬಟ್ಟೆಗಳನ್ನು ಧರಿಸುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಗುಡಿ ಮತ್ತು ಸಣ್ಣ ಕೈಗಾರಿಕೆಗೆ ಒತ್ತು ನೀಡಲಾಗಿದೆ ಎಂದರು.

ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಜಿಲ್ಲೆಯ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಕಾವೇರಿ ತವರು ಮಡಿಕೇರಿಯಲ್ಲಿ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಹಾಗೆಯೇ ಜಿ.ಪಂ.ವತಿಯಿಂದ ಸಂಜೀವಿನಿ ಒಕ್ಕೂಟಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮೇಳ ಏರ್ಪಡಿಸಲಾಗಿದ್ದು, ಮುಂದುವರೆದು ಕೈಮಗ್ಗ ಉತ್ಪನ್ನಗಳ ಮಾರಾಟ ಮೇಳ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಚರಕದ ಮೂಲಕ ವಸ್ತ್ರ ನೇಯ್ದು ಸ್ವದೇಶಿ ಉತ್ಪನ್ನಗಳಿಗೆ ಬೇಡಿಕೆ ತಂದು ಕೊಟ್ಟರು. ಆ ನಿಟ್ಟಿನಲ್ಲಿ ಸ್ವದೇಶಿ ಕೈಮಗ್ಗ ಉತ್ಪನ್ನಗಳನ್ನು ಬಳಸುವಂತಾಗಬೇಕು. ಇದರಿಂದ ಇಲ್ಲಿನ ಸ್ಥಳೀಯರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.
ಸರ್ಕಾರದಿಂದ ನೇಕಾರರಿಗೆ ವಿಮಾ ಸೌಲಭ್ಯ, ಸಾಲ ಸೌಲಭ್ಯ, ಜೊತೆಗೆ ಕೈಮಗ್ಗ ನೇಯ್ಗೆ ತರಬೇತಿ, ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜಿಲ್ಲೆಯಲ್ಲಿಯೂ ಸಹ ಪೊನ್ನಂಪೇಟೆ, ಕುಶಾಲನಗರದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಉತ್ಪಾದಿಸುವುದು ಸಂತಸದ ವಿಚಾರ ಎಂದರು.
ಜನಸಾಮಾನ್ಯರು ಇಂತಹ ಮೇಳದಲ್ಲಿ ಭಾಗವಹಿಸಿ ಕೈಮಗ್ಗ ಉತ್ಪನ್ನಗಳನ್ನು ಖರಿದಿಸಿದಾಗ ಕೈಮಗ್ಗ ಉತ್ಪನ್ನಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಅನಿತಾ ಪೂವಯ್ಯ ಅವರು ಸಲಹೆ ಮಾಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ಮೇಳದಲ್ಲಿ ಕೈಮಗ್ಗ ನೇಕಾರರು ಉತ್ಪಾದಿಸಿದ ರೇಷ್ಮೆ, ಕಾಟನ್, ಕಾಂಚಿಪುರಂ, ಮೊಣಕಾಲ್ಮೂರು, ಕಂಚಿಕಾಟನ್, ಇಳಕಲ್ ಸೀರೆಗಳು, ಟವಲ್, ಬೆಡ್‍ಶೀಟ್, ಲುಂಗಿ, ಕರವಸ್ತ್ರ ಮತ್ತಿತರ ನಿತ್ಯ ಬಳಕೆಯ ಕೈಮಗ್ಗ ವಸ್ತುಗಳನ್ನು ನೇರವಾಗಿ ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ರಾಷ್ಟ್ರದ ಪಶ್ಚಿಮ ಬಂಗಾಳ, ರಾಜ್ಯದ ಚಿಕ್ಕಬಳ್ಳಾಪುರ, ಗದಗ, ಶಿರಸಿ, ಹಾಗೆಯೇ ಬಾಗಲಕೋಟೆ, ಗದಗ, ದಾವಣಗೆರೆ, ಬೆಂಗಳೂರು, ತುಮಕೂರು, ಹಾವೇರಿ, ಬೆಳಗಾವಿ, ಕುಶಾಲನಗರ, ಪೊನ್ನಂಪೇಟೆ, ಹಾಸನ, ಬೆಂಗಳೂರು ಗ್ರಾಮಾಂತರ ಹೀಗೆ ವಿವಿಧ ಜಿಲ್ಲೆಗಳಿಂದ ಕೈಮಗ್ಗ ಉತ್ಪಾದಕರು ಆಗಮಿಸಿ ಕೈಮಗ್ಗ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. 20 ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದು ಗುರುಸ್ವಾಮಿ ಅವರು ಹೇಳಿದರು. ನಗರಸಭೆ ಸದಸ್ಯರಾದ ಉಷಾ ಕಾವೇರಪ್ಪ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.9 : ಕೊಡಗು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.