Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»14ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಚಾಲನೆ : ಆರೋಗ್ಯ ವಿಜ್ಞಾನ ಗ್ರಂಥಾಲಯಗಳು ಮಾಹಿತಿ ಮತ್ತು ಜ್ಞಾನದ ಭಂಡಾರ: ಡಾ.ಕೆಂಪರಾಜು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

14ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಚಾಲನೆ : ಆರೋಗ್ಯ ವಿಜ್ಞಾನ ಗ್ರಂಥಾಲಯಗಳು ಮಾಹಿತಿ ಮತ್ತು ಜ್ಞಾನದ ಭಂಡಾರ: ಡಾ.ಕೆಂಪರಾಜು

ಫೆಬ್ರವರಿ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯ ವಿಭಾಗ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಗಣ್ಯರಿಂದ ಚಾಲನೆ ದೊರೆಯಿತು.
ಈ ಬಾರಿ ಗ್ರಂಥಪಾಲಕರು ಮತ್ತು ವೈದ್ಯರಿಗೆ ಆರೋಗ್ಯ ವಿಜ್ಞಾನದ ಮಾಹಿತಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು ಅವರು ಮಾತನಾಡಿ ಭಾರತವನ್ನು ಜ್ಞಾನ ಸಮಾಜವಾಗಿ, ಗ್ರಂಥಾಲಯಗಳಾಗಿ ಪರಿವರ್ತಿಸುವುದು ದೃಷ್ಟಿಯಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ದಿನಗಳಲ್ಲಿ ಗ್ರಂಥಾಲಯಗಳು ತಮ್ಮ ಕಾರ್ಯಕ್ರಮ, ಕಾರ್ಯವಿಧಾನಗಳು, ಉಪಕರಣಗಳು ಮತ್ತು ತಂತ್ರಗಳನ್ನು ವಿವಿಧ ಗ್ರಂಥಾಲಯದ ಕೆಲಸಗಳು ಮತ್ತು ಸೇವೆಗಳಲ್ಲಿ ಮರು ವಿನ್ಯಾಸಗೊಳಿಸುವ ಅಗತ್ಯವಿದೆ ಎಂದರು.
ಸ್ಮಾರ್ಟ್ ಟೆಕ್ನಾಲಜೀಸ್‍ನ ಹೊರಹೊಮ್ಮುವಿಕೆ, ಮಾಹಿತಿ ಸಂಪನ್ಮೂಲಗಳ ಹೊಸ ಸ್ವರೂಪ, ಡಿಜಿಟಲ್ ಸಂಪನ್ಮೂಲಗಳ ತೀವ್ರ ಬಳಕೆ ಮತ್ತು ನವೀನ ತಂತ್ರಜ್ಞಾನಗಳು ಮತ್ತು ಪ್ರವೇಶವನ್ನು ಒದಗಿಸುವಲ್ಲಿ ಅದರ ಬಳಕೆಯು ಗ್ರಂಥಾಲಯ ವೃತ್ತಿಪರರಿಗೆ ಅತ್ಯಂತ ಬಲವಾದ ಅಂಶಗಳು ಮತ್ತು ಸವಾಲುಗಳಾಗಿವೆ ಎಂದರು.
‘ವೃತ್ತಿಪರರು ಬಳಕೆದಾರರಲ್ಲಿ ಮಾಹಿತಿ ಸಾಕ್ಷರತೆಯ ಕೌಶಲ್ಯವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ, ತಮ್ಮ ಜ್ಞಾನ ಮತ್ತು ಕೌಶಲ್ಯದ ನೆಲೆಯನ್ನು ನವೀಕರಿಸಬೇಕಿದೆ. ಆರೋಗ್ಯ ವಿಜ್ಞಾನ ಗ್ರಂಥಾಲಯಗಳು ಮಾಹಿತಿ ಮತ್ತು ಜ್ಞಾನ ವಿತರಣಾ ಪ್ರಕ್ರಿಯೆಯ ಸಕಾಲಿಕ ಪ್ರವೇಶದ ಮೂಲಕ ತಮ್ಮ ಗುರಿ ಸಾಧಿಸಲು ಆರೋಗ್ಯ ವಿಜ್ಞಾನ ವೃತ್ತಿಪರರಿಗೆ ಸಹಾಯ ಮಾಡಲು ಪ್ರಮುಖ ಮತ್ತು ವೇಗವರ್ಧಕ ಪಾತ್ರ ವಹಿಸುತ್ತದೆ ಎಂದು ಕೆಂಪರಾಜು ಅವರು ಹೇಳಿದರು.’
ಇಂದಿನ ಆಧುನಿಕ, ವೈಜ್ಞಾನಿಕ ಯುಗದಲ್ಲಿ ಶಿಕ್ಷಣ ಮತ್ತು ಅಭಿವೃದ್ಧಿ ಎಂಬುವುದು ಒಂದಕ್ಕೊಂದು ಬಿಡಿಸಲಾಗದ ಘಟಕವಾಗಿದೆ. ಶಿಕ್ಷಣವೆಂಬುದು ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಜಗತ್ತಿನಲ್ಲಿ ಎಲ್ಲಾ ಬದಲಾವಣೆ, ಸಂಶೋಧನೆ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಶಿಕ್ಷಣವೆಂಬುವುದು ವೇಗವರ್ಧಕವಾಗಿ ಕೆಲಸ ಮಾಡುತ್ತಿದೆ ಎಂದು ಅವರು ನುಡಿದರು.
ಶಿಕ್ಷಣವೆಂಬುದು ಇವತ್ತು ಎಲ್ಲಾ ಕಡೆ ಸ್ಪರ್ಧಾತ್ಮಕವಾಗಿ ದೇಶದ ಬೆಳವಣಿಗೆಗೆ ಒಂದು ಪ್ರಮುಖ ಅಂಶವಾಗಿದೆ. ಕೌಶಲ್ಯ ಪೂರ್ಣ ಜ್ಞಾನದ ಸಮಾಜವನ್ನು ನಿರ್ಮಾಣ ಮಾಡಲು ಶಿಕ್ಷಣವೆಂಬುವುದು ಪ್ರಮುಖ ಸಾಧನವಾಗಿದೆ ಎಂದು ತಿಳಿಸಿದರು. ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘದ ಅಧ್ಯಕ್ಷರಾದ ಡಾ.ಎಚ್.ಎಸ್.ಸಿದ್ದಮಲ್ಲಯ್ಯ ಅವರು ಮಾತನಾಡಿ ಗ್ರಂಥಾಲಯಗಳ ಸಂಘವು ಪ್ರತಿ ವರ್ಷ ವಿವಿಧ ವೈದ್ಯಕೀಯ ಕಾಲೇಜಿನಲ್ಲಿ ಸಮ್ಮೇಳನವನ್ನು ಆಯೋಜಿಸುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್, ವೈದ್ಯಕೀಯ ಅಧೀಕ್ಷರಾದ ಡಾ.ರೂಪೆಶ್ ಗೋಪಲ್, ಸಂಸ್ಥೆಯ ಆರ್ಥಿಕ ಸಲಹೆಗಾರರಾದ ಕೆ.ಆನಂದ, ಡಾ.ಮೇದಾ ಜೋಶಿ, ಸಂಸ್ಥೆಯ ಮಕ್ಕಳ ವಿಭಾಗದ ಪ್ರಾಧ್ಯಾಪಕರಾದ ಡಾ.ಪುರುಷೋತ್ತಮ್ ಡಿ.ಆರ್. ಅವರು ಮಾತನಾಡಿದರು. ಸಭಾ ಕಾರ್ಯಕ್ರಮದ ನಂತರ ವಿವಿಧ ವಿಷಯಗಳ ಬಗ್ಗೆ ವೈಜ್ಞಾನಿಕ ಕಾರ್ಯಕ್ರಮ ನಡೆಯಿತು.
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ. ಟಿ.ಡಿ.ಕೆಂಪರಾಜು, ಕೊಡಗು ವೈದ್ಯಕೀಯ ಕಾಲೇಜಿನ ನಿವೃತ ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಹಾಗೂ ಇತರರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಹಾಗೂ ಮುಖ್ಯ ಗ್ರಂಥಪಾಲರಾದ ಸ್ವಾಮಿ ನಾಯಕ ಸಿ.ಕೆ, ಕಾಲೇಜಿನ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ.ರವಿಕಿರಣ್ ಕಿಸಾನ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ವಿ.ಎಸ್. ಇತರರು ಇದ್ದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ರಾಜ್ಯ ಹಾಗೂ ದೇಶದ ವಿವಿಧ ವೈದ್ಯಕೀಯ, ದಂತ ವ್ಯೆದ್ಯಕೀಯ, ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಪಿಸಿಯೋ ಥೆರಪಿ ಕಾಲೇಜುಗಳ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಡಾ.ವಿಶಾಲ್ ಕುಮಾರ್ ಸ್ವಾಗತಿಸಿದರು. ಡಾ.ನರಸಿಂಹ ಬಿ.ಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.