ಫೆ.11 ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ
10/02/2023

ಮಡಿಕೇರಿ ಫೆ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಭಾಗಿತ್ವದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವು ಫೆಬ್ರವರಿ, 11 ರಂದು ಸಂಜೆ 4 ಗಂಟೆಗೆ ನಗರದ ಮಡಿಕಟ್ಟೆ, ದಾಸವಾಳ ರಸ್ತೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ.
