Advertisement
2:46 AM Saturday 2-December 2023

ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದ ಪೂಜೆ

10/02/2023

ಶನಿವಾರಸಂತೆ ಫೆ.10 :  ಸಮೀಪದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಶಾರದ ಪೂಜೆ ನೆರವೇರಿತು.

ವಿದ್ಯಾರ್ಥಿಗಳೇ ಮಂತ್ರ ಪಠಿಸಿ ದೇವಿಗೆ ಪೂಜೆ ಸಲ್ಲಿಸಿದರು.

ಸ್ಥಳೀಯ ಆರೋಗ್ಯ ವೈದ್ಯಾಧಿಕಾರಿಗಳಾದ ಸುಪರ್ಣಾ ಕೃಷ್ಣಾನಂದರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶಾರದ ಪೂಜೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕರಾದ ಸಿ.ಎಸ್.ಸತೀಶ್,  ಅತಿಥಿ ಶಿಕ್ಷಕಿ ಎಮ್.ಆರ್. ನವ್ಯ, ಶಾಲಾ ಎಸ್. ಡಿ .ಎಂ .ಸಿ ಅಧ್ಯಕ್ಷೆ ಬಿಂದು ಸುರೇಶ್, ದ್ರಾಕ್ಷಾಯಿಣಿ ಉಪಸ್ಥಿತರಿದ್ದರು.

ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ)