Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ಕ್ಕೆ ಚಾಲನೆ : ಮಕ್ಕಳ ಜ್ಞಾನಾರ್ಜನೆಗೆ ಕಲಿಕಾ ಹಬ್ಬ ಸಹಕಾರಿ: ಸುಜಾತ ಚಂದ್ರಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ಕ್ಕೆ ಚಾಲನೆ : ಮಕ್ಕಳ ಜ್ಞಾನಾರ್ಜನೆಗೆ ಕಲಿಕಾ ಹಬ್ಬ ಸಹಕಾರಿ: ಸುಜಾತ ಚಂದ್ರಶೇಖರ್

ಫೆಬ್ರವರಿ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ ಕ್ಕೆ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ದೊರೆಯಿತು.
ಮೂರು ದಿನಗಳ ಕಾಲ ನಡೆಯುವ ಕಲಿಕಾ ಹಬ್ಬಕ್ಕೆ ಮೂರ್ನಾಡು ಗ್ರಾ.ಪಂ.ಅಧ್ಯಕ್ಷರಾದ ಸುಜಾತ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಿಕಾ ಹಬ್ಬದಿಂದ ಮಕ್ಕಳ ಜ್ಞಾನಾರ್ಜನೆಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.
ವಿದ್ಯಾರ್ಥಿಗಳು ಸದಾ ಚಲನಶೀಲತೆ, ಕ್ರೀಯಾಶೀಲತೆಯಿಂದ ಇರಬೇಕು. ಆ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲತೆ ಬೆಳೆಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ ಸರ್ಕಾರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬವನ್ನು ಏರ್ಪಡಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಕಲಿಕಾ ಹಬ್ಬ ಉತ್ತಮ ವೇದಿಕೆ ಆಗಿದೆ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರು ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ಹಮ್ಮಿಕೊಂಡಿದೆ ಎಂದರು.
ಕಲಿಕೆಯನ್ನು ಸಂತಸದಿಂದ ಪಡೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಅವಕಾಶ ಕಲ್ಪಿಸಿದೆ ಎಂದರು.
ಮೂರ್ನಾಡು ಸ.ಮಾ.ಪ್ರಾ.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರಾದ ಎಚ್.ಬಿ.ದಿನೇಶ್ ಅವರು ಮಾತನಾಡಿ ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮಲ್ಲಿರುವ ಪ್ರತಿಭಾ ಕಲಾ ಪ್ರದರ್ಶನಕ್ಕೆ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಕೆ.ಕುಮಾರ್ ಅವರು ಮಾತನಾಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳಿಂದ ಕಲಿಕೆಯಲ್ಲಿ ಮುಂದೆ ಇದ್ದಾರೆ. ಕಲಿಕೆ ಜೊತೆಗೆ ನೃತ್ಯ, ಭಾಷಣ, ಕಲೆ, ಸಂಗೀತ, ಇತರೆ ಚಟುವಟಿಕೆಗಳಲ್ಲಿ ಮುಂದೆ ಇದ್ದಾರೆ. ಆ ನಿಟ್ಟಿನಲ್ಲಿ ಕಲಿಕಾ ಹಬ್ಬ ಉತ್ತಮ ಅವಕಾಶವಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಮೂರ್ನಾಡು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಿಮ್ಮಿ ಸೀಕ್ವೇರಾ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ, ಇತರರು ಮಾತನಾಡಿದರು.
ಕುಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗಿರಿಜನ ಹಾಡಿ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಮೂರ್ನಾಡು ವಾಟೆಕಾಡು ಶಾಲೆಯ ವಿದ್ಯಾರ್ಥಿಗಳು ಬನ್ನಿ ಕೂಡಿ ಹಾಡೋಣ ನೃತ್ಯ ಪ್ರದರ್ಶಿಸಿದರು. ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹುಲಿವೇಷ ನೃತ್ಯ ಪ್ರದರ್ಶನ ಮಾಡಿದರು. ಕೃಷ್ಣ ಮತ್ತು ಪಾರ್ಥ ಪೌರಾಣಿಕ ನಾಟಕದ ನೃತ್ಯ ಪ್ರದರ್ಶನ ಗಮನ ಸೆಳೆಯಿತು.
ಚಪ್ಪರ, ಗದ್ದೆ ಉಳುವ ರೈತ, ಹಂಪಿ, ಕಲ್ಲಿನ ರಥ ಮತ್ತಿತರ ವಸ್ತುಪ್ರದರ್ಶನ ಗಮನ ಸೆಳೆಯಿತು. ಮೂರ್ನಾಡು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಡೊಳ್ಳು ಕುಣಿತ, ಕಂಸಾಳೆ, ನೃತ್ಯ ಪ್ರದರ್ಶನ ನೋಡುಗರನ್ನು ಆಕರ್ಷಿಸಿತು. ಎನ್‍ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಭಾರತೀಯ ಸೇವಾ ದಳ ತಂಡಗಳು ಪಾಲ್ಗೊಂಡಿದ್ದರು. ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು. ಸ್ತಬ್ಧ ಚಿತ್ರದ ಮೂಲಕ ಮೆರವಣಿಗೆ ನಡೆಯಿತು.
ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಪಿ.ಗುರುರಾಜ್, ಶಿಕ್ಷಣಾಧಿಕಾರಿ ದೊಡ್ಡೇಗೌಡ, ವಿಷಯ ಪರಿವೀಕ್ಷಕರಾದ ಬಿಂದು, ಮೂರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಲಲಿತ, ಚಿತ್ರಕಲೆ ಶಿಕ್ಷಕರಾದ ಉ.ರಾ.ನಾಗೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ಇತರರು ಇದ್ದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಕಲಿಕಾ ಹಬ್ಬದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದರು. ಹಬ್ಬ ಹಬ್ಬ ಹಬ್ಬ ಸಂತಸದ ಕಲಿಕೆಯ ಹಬ್ಬ, ಭಾವದ ಬೆಳಕಿಗೆ, ಕಲ್ಪನೆಯ ಕನಸಿಗೆ ರೆಕ್ಕೆಯ ಕಟ್ಟುವ ಹಬ್ಬ… ಹಾಡು ಜನಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.