Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಹುಲಿ ಕೊಂದು ಜನ ಜೈಲಿಗೆ ಹೋಗಬೇಕೆ : ಜನಪ್ರತಿನಿಧಿಗಳು ನಾಟಕ ನಿಲ್ಲಿಸಲಿ : ಎ.ಎಸ್.ಪೊನ್ನಣ್ಣ ಅಸಮಾಧಾನ : ಅರಣ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುಲಿ ಕೊಂದು ಜನ ಜೈಲಿಗೆ ಹೋಗಬೇಕೆ : ಜನಪ್ರತಿನಿಧಿಗಳು ನಾಟಕ ನಿಲ್ಲಿಸಲಿ : ಎ.ಎಸ್.ಪೊನ್ನಣ್ಣ ಅಸಮಾಧಾನ : ಅರಣ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ

ಫೆಬ್ರವರಿ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.14 : ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಎರಡು ಅಮಾಯಕ ಜೀವಗಳು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.
ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ, ಮರುದಿನ ಬೆಳಗ್ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಅರಣ್ಯ ಅಧಿಕಾರಿಗಳು ಚೇತನ್ ಮೃತಪಟ್ಟಾಗಲೇ ಎಚ್ಚೆತ್ತುಕೊಂಡಿದ್ದರೆ ವೃದ್ಧನ ಜೀವ ಉಳಿಯುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರತಿನಿಧಿಗಳು ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ಮಾಡದೆ ಭಾವನಾತ್ಮಕ ಭಾಷಣಗಳನ್ನು ಮಾಡುತ್ತಿದ್ದಾರೆ. ಹುಲಿಗಳನ್ನು ಗುಂಡು ಹೊಡೆದು ಕೊಲ್ಲುವ ಮಾತುಗಳನ್ನಾಡುತ್ತಾರೆ. ಹುಲಿಯನ್ನು ಕೊಂದು ಜನರು ಜೈಲಿಗೆ ಹೋಗಬೇಕೆ, ಈ ತಮಾಷೆಯನ್ನು ಇವರು ನೋಡಬೇಕೆ ಎಂದು ಪ್ರಶ್ನಿಸಿದರು.
ಜನಪ್ರತಿನಿಧಿಗಳು ಎನಿಸಿಕೊಂಡವರು ನಾಟಕ ಮಾಡುವುದನ್ನು ಬಿಡಬೇಕು, ಜನರ ಜೀವನದೊಂದಿಗೆ ಚೆಲ್ಲಾಟ ಬೇಡ. ಒಂದು ಹುಲಿಯನ್ನು ಕೊಂದಾಕ್ಷಣ ಸಮಸ್ಯೆ ಬಗೆಹರಿದು ಬಿಡಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕಿದೆ, ಹುಲಿ ಯಾಕೆ ಕಾಡು ಬಿಟ್ಟು ನಾಡಿಗೆ ಬರುತ್ತಿದೆ ಎನ್ನುವ ಬಗ್ಗೆ ಅಧ್ಯಯನ ನಡೆಯಬೇಕಾಗಿದೆ. ಕಾಡುಗಳನ್ನು ನಾಶ ಮಾಡಿ ತೋಟಗಳನ್ನೇ ಕಾಡೆಂದು ಅರಣ್ಯ ಅಧಿಕಾರಿಗಳು ಪ್ರತಿಬಿಂಬಿಸುತ್ತಿದ್ದಾರೆ. ಹುಲಿ ಎರಡು ಅಮಾಯಕ ಜೀವಗಳನ್ನು ಬಲಿ ಪಡೆದ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಅರಣ್ಯ ಅಧಿಕಾರಿಗಳು ತಮ್ಮ ಕಡತದಲ್ಲಿ ಉಲ್ಲೇಖಿಸಿದ್ದಾರೆ. ಇದು ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುವ ಯತ್ನವಾಗಿದೆ ಎಂದು ಪೊನ್ನಣ್ಣ ಆರೋಪಿಸಿದರು.
ಸಂಬಂಧಪಟ್ಟ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ವನ್ಯಜೀವಿಗಳ ದಾಳಿ ಕುರಿತು ಉನ್ನತ ಮಟ್ಟದ ಸಭೆ ನಡೆಸಬೇಕು. ಹುಲಿ ಉಪಟಳ ತಡೆಯುವಲ್ಲಿ ವಿಫಲರಾಗಿರುವ ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು, ಕಠಿಣ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು ಮತ್ತು ಹುಲಿ ಉಪಟಳದ ವಿರುದ್ಧ ಅರಣ್ಯ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.
ವಿಶ್ವದ ವಿವಿಧ ದೇಶಗಳಲ್ಲಿ ದಟ್ಟ ಅರಣ್ಯ ಪ್ರದೇಶವಿದೆ, ಅಲ್ಲಿನ ಜನ ನಿರಾತಂಕವಾಗಿ ಕೃಷಿ ಕಾರ್ಯ ಮಾಡುತ್ತಿದ್ದಾರೆ. ಆದರೆ ಇಲ್ಲಿ ಮಾತ್ರ ಯಾಕೆ ಹೀಗಾಗುತ್ತಿದೆ, ಅಧಿಕಾರಿಗಳು ಈ ಬಗ್ಗೆ ಯಾಕೆ ಚಿಂತನೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ ಪೊನ್ನಣ್ಣ, ಕಾಫಿ ತೋಟಗಳಿಗೆ ಮಾಲೀಕರು ಹಾಗೂ ಕಾರ್ಮಿಕರು ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾನೂನು ಘಟಕದ ಜಿಲ್ಲಾಧ್ಯಕ್ಷ ಶ್ರೀಧರ್ ನಾಯರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಕಿರಣ್ ಪೂವಯ್ಯ, ಬಲ್ಯಾಟಂಡ ಕೌಶಿಕ್ ಹಾಗೂ ಶರೀನ್ ಗಿರೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.