ಕೊಡಗು : ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯಿಂದ ನೂತನ ಎಸ್‍ಪಿ ಗೆ ಅಭಿನಂದನೆ
15/02/2023

ಮಡಿಕೇರಿ ಫೆ.15 : ಭಾರತ ಸ್ಕೌಟ್ಸ್ ಮತ್ತು ಗೈಡ್‍ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕೊಡಗು ಜಿಲ್ಲೆಗೆ ಹೊಸದಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಆದ ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷರೂ ಆಗಿರುವ ಕೆ.ರಾಮರಾಜನ್ ಅವರನ್ನು ನಗರದ ಎಸ್.ಪಿ. ಕಚೇರಿಯಲ್ಲಿ ಭೇಟಿ ಮಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಗೈಡ್‍ನ ಸ್ಕಾರ್ಫ್ ಧರಿಸುವುದರ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಬೇಬಿ ಮ್ಯಾಥ್ಯೂ ಸಂಸ್ಥೆಯ ಚಟುವಟಿಕೆಗಳಿಗೆ ಸಹಕರಿಸುವಂತೆ ಎಸ್.ಪಿ.ಅವರಲ್ಲಿ ಮನವಿ ಮಾಡಿದರು.
ಈ ಸಂದರ್ಭ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸ್ವಿಕೇರಾ, ಸ್ಥಾನಿಕ ಆಯುಕ್ತ ಹೆಚ್.ಆರ್ ಮುತ್ತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ ವಸಂತಿ, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಹಾಗೂ ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಹಾಜರಿದ್ದರು.
