Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಇದು ಭಾರತದ ಸಾಧನೆ : 400 ಮಿಲಿಯನ್ ವಿದ್ಯುತ್ ವಾಹನಗಳ ಉತ್ಪಾದನೆ : ಎಲ್ಲಾ ಕುಟುಂಬಗಳಿಗೆ ಸೋಲಾರ್ ಒಲೆಗಳ ಭಾಗ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇದು ಭಾರತದ ಸಾಧನೆ : 400 ಮಿಲಿಯನ್ ವಿದ್ಯುತ್ ವಾಹನಗಳ ಉತ್ಪಾದನೆ : ಎಲ್ಲಾ ಕುಟುಂಬಗಳಿಗೆ ಸೋಲಾರ್ ಒಲೆಗಳ ಭಾಗ್ಯ

ಫೆಬ್ರವರಿ 16, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.16 : ವಿಶ್ವದಲ್ಲಿಯೇ ಅತಿಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿ ಭಾರತ ಗಮನ ಸೆಳೆಯುತ್ತಿದೆ. ದೇಶದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ. ಅಭಿವೃದ್ಧಿಯ ವೇಗ ಗಮನಿಸಿದರೆ ಬರುವ ವರ್ಷಗಳಲ್ಲಿ ಭಾರತದಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆಯು ಇದೇ ಮಾತು ಹೇಳಿದೆ. ಇದೇ ದಶಕದಲ್ಲಿ ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿದೆ.
ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ (ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು) ಸ್ತಂಭಗಳಿವೆ. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ.
ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ ‘ಒನ್ ನೇಷನ್, ಒನ್ ಗ್ರಿಡ್’ ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ. ಎನರ್ಜಿ ಟರ್ಮಿನಲ್‍ಗಳ ಸಾಮಥ್ರ್ಯ ವೃದ್ಧಿಸಲಾಗುತ್ತಿದೆ.
ಸಿಎನ್‍ಜಿ ಸ್ಟೇಷನ್‍ಗಳು 2014ಲ್ಲಿ 900 ಮಾತ್ರವೇ ಇತ್ತು. ಆದರೆ, ಈಗ 5000ಕ್ಕೆ ಮುಟ್ಟಿವೆ. ಗ್ಯಾಸ್ ಪೈಪ್‍ಲೈನ್ ಜಾಲ ವಿಸ್ತರಿಸಲು ಶ್ರಮಿಸುತ್ತಿದ್ದೇವೆ. 2014ರಲ್ಲಿ 14 ಸಾವಿರ ಕಿಮೀ ಪೈಪ್‍ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ. ಶೀಘ್ರದಲ್ಲಿಯೇ ಇದು 35 ಸಾವಿರ ಕಿಮೀ ದಾಟಲಿದೆ. ಭಾರತವು ನಿಮ್ಮ ಹೂಡಿಕೆಗೆ ಅತ್ಯಂತ ಮಹತ್ವದ ಅವಕಾಶ ನೀಡಲಿದೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ರೂ.8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಾಗುತ್ತಿದೆ.
ಇವಿ ಬ್ಯಾಟರಿಗಳ ದರ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. 50 ಗಿಗಾವ್ಯಾಟ್‍ಗಳಷ್ಟು ಸಾಮಥ್ರ್ಯದ ಅತ್ಯಾಧುನಿಕ ಕೆಮಿಸ್ಟ್ರಿ ಸೆಲ್ ತಯಾರಿಕೆಗಾಗಿ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ. ದೇಶದಲ್ಲಿ ಬ್ಯಾಟರಿ ಉತ್ಪಾದನೆಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಲಾಗಿದೆ, ಸೌರಶಕ್ತಿ ಉತ್ಪಾದನೆ ಶೇ.20ರಷ್ಟು ಹೆಚ್ಚಾಗಿದೆ. ಪವನ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ. ಈ ದಶಕದ ಅಂತ್ಯದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಅರ್ಧದಷ್ಟನ್ನು ಪರಿಸರಸ್ನೇಹಿ ಮೂಲಗಳಿಂದಲೂ ಉತ್ಪಾದಿಸುವ ಗುರಿ ಇರಿಸಿಕೊಳ್ಳಲಾಗಿದೆ.
ಇ-20 ಗುರಿಗಳನ್ನು ಇಂದು ಪರಿಚಯಿಸಲಾಗುತ್ತಿದೆ. ಆರಂಭದಲ್ಲಿ ಇದು ಕೆಲವೇ ನಗರಗಳಲ್ಲಿ ಮಾತ್ರವೇ ಇರುತ್ತದೆ. ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಇದನ್ನು ವಿಸ್ತರಿಸಲಾಗುತ್ತದೆ. ವಿದ್ಯುತ್ ಉತ್ಪಾದನೆ, ವಿತರಣೆ, ಬಳಕೆಯಲ್ಲಿ ಉಳಿತಾಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ನವೀಕರಿಸಬಹುದಾದ ಇಂಧನ ಮೂಲಗಳಿಗೆ ಆದ್ಯತೆ ಸಿಗಲಿದೆ. ಸೋಲಾರ್ ಶಕ್ತಿಯಿಂದ ಮನೆ, ಗ್ರಾಮ, ಏರ್‍ಪೋರ್ಟ್ , ಕೃಷಿ ಮುನ್ನಡೆಯುತ್ತಿರುವ ಹಲವು ಉದಾಹರಣೆಗಳಿವೆ.
ಮುಂದಿನ ಕೆಲವೇ ದಿನಗಳಲ್ಲಿ ಎಲ್ಲಾ ಕುಟುಂಬಗಳಲ್ಲಿ ಸೋಲಾರ್ ಒಲೆಗಳು ಬಳಕೆಗೆ ಬರಲಿವೆ. ಇದರಿಂದ ಇಂಧನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಪ್ಲಾಸ್ಟಿಕ್ ಬಾಟಲಿಗಳಿಂದ ನಾವು ರೂಪಿಸಿರುವ ಸಮವಸ್ತ್ರಗಳು ಯಾವುದೇ ರೀತಿಯಲ್ಲಿ ಗುಣಮಟ್ಟ ಅಥವಾ ಫ್ಯಾಷನ್ ವಿಚಾರದಲ್ಲಿ ಕಡಿಮೆಯಾಗಿಲ್ಲ. 10 ಕೋಟಿ ಪ್ಲಾಸ್ಟಿಕ್ ಬಾಟಲಿಗಳನ್ನು ಹೀಗೆ ಮರುಬಳಕೆ ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ.
ಭಾರತವು ವಿಶ್ವದ 4ನೇ ಅತಿದೊಡ್ಡ ವಾಹನದ ಮಾರುಕಟ್ಟೆಯಾಗಿದೆ. ಪ್ರಸ್ತುತ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಇಂಧನ ಆಧಾರಿತ ವಾಹನಗಳು ಪ್ರಾಬಲ್ಯತೆ ಹೊಂದಿದ್ದರೂ, ಪ್ರಾಥಮಿಕ ಸಾರಿಗೆ ವಿಧಾನವಾಗಿ ಇಂಧನ ಆಧಾರಿತ ವಾಹನಗಳ ಬದಲಾಗಿ ವಿದ್ಯುತ್ ವಾಹನಗಳನ್ನು ಬಳಸುವುದನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಮಹತ್ವಾಕಾಂಕ್ಷಿ ಗುರಿಗಳನ್ನು ಹೊಂದಿದೆ ಮತ್ತು ಅನುಕೂಲಕರ ನೀತಿಗಳನ್ನು ರೂಪಿಸಿದೆ.
ರಾಷ್ಟ್ರೀಯ ಎಲೆಕ್ಟ್ರಿಕ್ ಮೊಬಿಲಿಟಿ ಪ್ಲಾನ್ (ಎನ್‍ಇಎಂಎಂಪಿ) 2020 ಅಡಿಯಲ್ಲಿ, 2020 ರಿಂದ ಮುಂದಕ್ಕೆ ವರ್ಷಕ್ಕೆ 6-7 ಮಿಲಿಯನ್ ಹೈಬ್ರಿಡ್ ಮತ್ತು ವಿದ್ಯುತ್ ವಾಹನಗಳ ಮಾರಾಟವನ್ನು ಸಾಧಿಸುವ ಮಹತ್ವಾಕಾಂಕ್ಷಿ ಗುರಿ ಇದೆ. ಹೆಚ್ಚುವರಿಯಾಗಿ, ಭಾರತ ಸರ್ಕಾರವು 2030 ಇಸವಿಯ ಒಳಗೆ 400 ಮಿಲಿಯನ್ ಗ್ರಾಹಕರ ವಿದ್ಯುತ್ ವಾಹನದ ಕನಸನ್ನು ನನಸಾಗಿಸಲು ಗುರಿ ಹೊಂದಲಾಗಿದೆ. ಈ ಗುರಿಗಳನ್ನು ಸಾಧಿಸಲು ಪೂರ್ವಭಾವಿ ಹೆಜ್ಜೆಯಾಗಿ, ಇತ್ತೀಚೆಗೆ ಸರ್ಕಾರವು ಹೈಬ್ರಿಡ್ ಮತ್ತು ವಿದ್ಯುತ್ ವಾಹನಗಳ ವೇಗವಾದ ಅಳವಡಿಕೆ ಮತ್ತು ಉತ್ಪಾದನೆ (ಫೇಮ್) ಯೋಜನೆಯ 11ನೇ ಹಂತವನ್ನು ಘೋಷಿಸಿದ್ದು, 1ನೇ ಏಪ್ರಿಲ್ 2019 ರಿಂದ ಮುಂದಿನ 3 ವರ್ಷಗಳ ಅವಧಿಗೆ ರೂ. 10,000 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಈ ಯೋಜನೆಯು ವಿದ್ಯುತ್ ವಾಹನಗಳನ್ನು ಖರೀದಿಸಲು ಗ್ರಾಹಕರಿಗೆ ಬೇಡಿಕೆ ಪ್ರೋತ್ಸಾಹಕಗಳನ್ನು ಮತ್ತು ಚಾಜಿರ್ಂಗ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಉತ್ಪಾದಕರಿಗೆ ಪ್ರೋತ್ಸಾಹಕಗಳನ್ನು ನೀಡುವುದನ್ನು ಒಳಗೊಂಡಿದೆ.
ಆರ್ಥಿಕ ಪ್ರಯೋಜನಗಳ, ವಿಶೇಷವಾಗಿ ಎಂಎಸ್‍ಎಂಇ ವಲಯದಲ್ಲಿ ಉದ್ಯೋಗ ಸೃಷ್ಟಿ ಸಾಮಥ್ರ್ಯದ ಜೊತೆಗೆ, ವಿದ್ಯುತ್ ವಾಹನಗಳಿಗೆ ಬದಲಾವಣೆ ಮಾಡುವುದು ಗಮನಾರ್ಹ ಪರಿಸರ ಪ್ರಯೋಜನಗಳನ್ನು ಕೂಡ ಹೊಂದಿದೆ. ಫೇಮ್ 11 ಯೋಜನೆಯ ಅಡಿಯಲ್ಲಿ ಅರ್ಹವಾದ ವಾಹನಗಳು ತಮ್ಮ ಜೀವಿತಾವಧಿಯಲ್ಲಿ ರೂ. 17.2 ಸಾವಿರ ಕೋಟಿ ಮೌಲ್ಯದ 5.4 ಮಿಲಿಯನ್ ಟನ್‍ಗಳಷ್ಟು ತೈಲವನ್ನು ಉಳಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.