ಮಾ.8 ರಂದು ಕುಶಾಲನಗರದಲ್ಲಿ ಮಹಿಳಾ ದಿನಾಚರಣೆ
16/02/2023

ಕುಶಾಲನಗರ, ಫೆ.16 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.8 ರಂದು ಕುಶಾಲನಗರದಲ್ಲಿ ಮಹಿಳಾ ಪತ್ರಕರ್ತರು, ಪತ್ರಕರ್ತರ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕ ಮಹಿಳೆಯರನ್ನೊಳಗೊಂಡಂತೆ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನ ಆಚರಿಸಲು ನಿರ್ಧರಿಸಲಾಯಿತು.
ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಅವರನ್ನು ಕಾರ್ಯಕ್ರಮದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಊಟೋಪಚಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದವರು ಮಹತ್ವಪೂರ್ಣ ಸಲಹೆಗಳನ್ನು ನೀಡಿದರು.
ಕಾರ್ಯಕ್ರಮ ಸಂಚಾಲಕರಾದ ವನಿತಾ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಆಧ್ಯಕ್ಷ ಎಂ.ಎನ್. ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ ಜೆ ಶಿವರಾಜ್, ಮೊಹಮ್ಮದ್ ಮುಸ್ತಫ, ರಾಷ್ಟ್ರೀಯ ಸಮಿತಿ ಸದಸ್ಯ ಸುನಿಲ್ ಪೊನ್ನೇಟಿ, ಸಂಘದ ಜಿಲ್ಲಾ ನಿರ್ದೇಶಕ ಟಿ.ಆರ್. ಪ್ರಭುದೇವ್, ಜಯಪ್ರಕಾಶ್, ನಂಜುಂಡಸ್ವಾಮಿ, ಪ್ರದೀಪ್ ಕುಮಾರ್ ಜಯಲಕ್ಷ್ಮಿ ನಂಜುಂಡಸ್ವಾಮಿ, ಬಿಂದು ಸುನಿಲ್, ಭಜನಾ ಮಂಡಳಿ ಪ್ರಮುಖರಾದ ರಮ ವಿಜಯೇಂದ್ರ ಲಕ್ಷ್ಮಿ, ಸುಮ ಶಿವರಾಜ್ ಇದ್ದರು.














