Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ರಸ್ತೆ ದುರಸ್ತಿಗೆ ಆಗ್ರಹಿಸಿ ನಂದಿಮೊಟ್ಟೆ-ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ : ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಸ್ತೆ ದುರಸ್ತಿಗೆ ಆಗ್ರಹಿಸಿ ನಂದಿಮೊಟ್ಟೆ-ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ : ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಫೆಬ್ರವರಿ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 : ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ನಂದಿಮೊಟ್ಟೆ ಜಂಕ್ಷನ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಹೆಬ್ಬೆಟ್ಟಗೇರಿ ಗ್ರಾಮಸ್ಥರಾದ ರಮೇಶ್, ನಂದಿಮೊಟ್ಟೆ ಜಂಕ್ಷನ್‍ನಿಂದ ಹೆಬ್ಬೆಟ್ಟಗೇರಿ ಹಾಗೂ ದೇವಸ್ತೂರು ಗ್ರಾಮಗಳಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ಗ್ರಾಮಗಳಲ್ಲಿ ಶಾಲೆ ಮುಚ್ಚಲ್ಪಟ್ಟಿರುವುದರಿಂದ ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕೂಡ ಇಲ್ಲದಿರುವುದರಿಂದ ಬಹುತೇಕ ಮಂದಿ ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಆದರೆ, ರಸ್ತೆ ಹದಗಟ್ಟಿರುವುದರಿಂದ ಆಟೋ ಹಾಗೂ ಖಾಸಗಿ ವಾಹನಗಳು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಿದ್ದಾರೆ. ಬರುವ ವಾಹನಗಳಿಗೆ ದುಬಾರಿ ಬಾಡಿಗೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತುರ್ತು ಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್ ಕೂಡ ಈ ರಸ್ತೆಯಲ್ಲಿ ಸಂಚರಿಸಲಾಗದಷ್ಟು ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇದೇ ರಸ್ತೆಯ ಮೂಲಕ ಪ್ರವಾಸಿ ತಾಣ ಮಾಂದಲ್‍ಪಟ್ಟಿಗೆ ಸಂಚರಿಸಬೇಕಿದೆ. ಪ್ರವಾಸಿಗರು ಈ ರಸ್ತೆಯಲ್ಲಿ ತೆರಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಹದಗೆಟ್ಟಿರುವ ರಸ್ತೆಯಲ್ಲಿ ಸಂಚರಿಸುತ್ತಿರುವುದರಿಂದ ಅವರಿಗೂ ಪ್ರಾಣಾಪಾಯ ಸಂಭವಿಸುವ ಭೀತಿ ಇದೆ. ರಸ್ತೆ ದುರಸ್ತಿ ಬಗ್ಗೆ ಸಂಬಂಧಪಟ್ಟವರನ್ನು ವಿಚಾರಿಸಿದಾಗ ಇವತ್ತು ಮಾಡುತ್ತೇವೆ, ನಾಳೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕೆಲ ಮೂಲಗಳ ಪ್ರಕಾರ ಈ ರಸ್ತೆಗೆ ಇನ್ನು ಅನುದಾನವೇ ಮೀಸಲಿಟ್ಟಿಲ್ಲ. ಹೀಗಾಗಿ ರಸ್ತೆ ದುರಸ್ತಿ ಮಾಡುವವರೆಗೆ ಹೋರಾಟ ಅನಿವಾರ್ಯವಾಗಿದೆ ಎಂದರು.
ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬರಬೇಕೆಂದು ಪ್ರತಿಭಟಕಾಕಾರರು ಪಟ್ಟುಹಿಡಿದರು. ರಸ್ತೆ ತಡೆ ಹಿಡಿದಿದ್ದರಿಂದ ಆರ್‍ಟಿಓ, ಅಬ್ಬಿಫಾಲ್ಸ್, ಮಾಂದಲ್‍ಪಟ್ಟಿ ರಸ್ತೆ ಸಂಚಾರ ಅವ್ಯವಸ್ಥಗೊಂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಎಇಇ ಯುವರಾಜು, ಈ ರಸ್ತೆ ಹಿಂದೆ ಜಿ.ಪಂ. ವ್ಯಾಪ್ತಿಗೆ ಒಳಪಟ್ಟಿತ್ತು. 2020ರ ಬಳಿಕ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬಂದಿದ್ದು, ಸುಮಾರು 11 ಲಕ್ಷ ರೂ. ವೆಚ್ಚದಲ್ಲಿ ಶೀಘ್ರದಲ್ಲೇ ರಸ್ತೆಯ ಗುಂಡಿ ಮುಚ್ಚುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ನೀವು ಗುಂಡಿ ಮುಚ್ಚುವುದು ಬೇಡ. ರಸ್ತೆಯಲ್ಲಿ ಇರುವ ಜಲ್ಲಿ ತೆಗೆದುಕೊಡಿ, ಮಣ್ಣಿನಲ್ಲಿ ಸಮತಟ್ಟು ಮಾಡಿ ನಾವೇ ಸರಿಪಡಿಸಿಕೊಳ್ಳುತ್ತೇವೆ. ಈ ರಸ್ತೆಯನ್ನು ನೋಡಿದರೆ ನಿಮಗೆ ಪ್ಯಾಚ್ ವರ್ಕ್ ಮಾಡುವ ತರ ಇದೇಯೇ? ಇಲ್ಲಿ ಅನಾಹುತ ಸಂಭವಿಸಿದ ಮೇಲೆ ನೀವು ಬರುತ್ತಿರಷ್ಟೇ. ಕೆಲವು ಭಾಗದಲ್ಲಿ ರಸ್ತೆಯೇ ಇಲ್ಲ. 11 ಲಕ್ಷದಲ್ಲಿ ಈ ರಸ್ತೆ ದುರಸ್ತಿ ಸಾಧ್ಯವಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಗುತ್ತಿಗೆದಾರರ ಬೇಜವಬ್ದಾರಿತನದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಕೆಲಸಗಳು ಆಗುತ್ತಿಲ್ಲ. ಗಾಳಿಬೀಡು ವ್ಯಾಪ್ತಿಯಲ್ಲೂ ಹೀಗೆಯೇ ಆಗಿದೆ. ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಅಂತವರಿಗೆ ಯಾಕೆ ಕೆಲಸ ಕೊಡುತ್ತಿರಾ ಎಂದು ಪ್ರಶ್ನಿಸಿದರು.
ಪ್ರತಿಭಟನಾಕಾರರ ಆಕ್ರೋಶಕ್ಕೆ ಮಣಿದ ಲೋಕೋಪಯೋಗಿ ಇಲಾಖೆ ಎಇಇ ಯುವರಾಜು, ಸೋಮವಾರದೊಳಗಾಗಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗುತ್ತದೆ. ಹಣ ಕಡಿಮೆಯಾದರೆ ಹೆಚ್ಚುವರಿ ಅನುದಾನ ಬಳಸಿ ರಸ್ತೆ ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಆದರೂ ರಸ್ತೆ ದುರಸ್ತಿಯಾಗದಿದ್ದಲ್ಲಿ ಜೆಸಿಬಿ ಮೂಲಕ ರಸ್ತೆ ಅಗೆದು ಸಂಪೂರ್ಣ ರಸ್ತೆ ತಡೆ ಮಾಡುವ ಜೊತೆಗೆ ಚುನಾವಣೆ ಬಹಿಷ್ಕರಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಸ್ಥಳದಲ್ಲಿ ಗ್ರಾಮಾಂತರ ಠಾಣಾ ಪೊಲೀಸರು ಭದ್ರತೆ ಒದಗಿಸಿದ್ದರು.
ಕೆ.ನಿಡುಗಣೆ ಗ್ರಾ.ಪಂ. ಮಾಜಿ ಸದಸ್ಯ ರಘು, ಹೆಬ್ಬೆಟ್ಟಗೇರಿ ಗ್ರಾಮಸ್ಥರಾದ ಗಣೇಶ್, ವಿನೋದ್, ಪಿಲೋಮಿನಾ, ನೇತ್ರಾ, ಪುರುಷೋತ್ತಮ, ದೇವಸ್ತೂರು ಗ್ರಾಮಸ್ಥರಾದ ಕುಕ್ಕೇರ ಲಕ್ಷ್ಮಣ್, ನಯನ್, ಸುಜಿತ್, ಸತೀಶ್, ದರ್ಶಿತ್, ರಜಿತ್  ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.