Advertisement
2:22 AM Thursday 7-December 2023

ಯುಗಾದಿ ಪ್ರಯುಕ್ತ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ

17/02/2023

ಮಡಿಕೇರಿ ಫೆ.17 : ಯುಗಾದಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಮಾ.24 ರಿಂದ 26ರ ವರೆಗೆ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಭಜರಂಗದಳದ ಸಂಚಾಲಕ ರಾಧಾಕೃಷ್ಣ ರೈ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಾ.24 ರಂದು ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ಮಾ.26 ರಂದು ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ರೂ.50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನದ ತಂಡಕ್ಕೆ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹಗ್ಗಜಗ್ಗಾಟ ಪಂದ್ಯಾವಳಿಯ ವಿಜೇತರಿಗೆ ರೂ.15 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ರೂ.10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೆ ವೈಯಕ್ತಿಕ ಬಹುಮಾನ ವಿತರಿಸಲಾಗವುದೆಂದು ತಿಳಿಸಿದರು.
ಆಸಕ್ತರು ರೂ.2ಸಾವಿರ ಪ್ರವೇಶ ಶುಲ್ಕ ಪಾವತಿಸಿ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿಗೆ 9448647252, 9945045557, 9008142090 ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿಗೋಷ್ಠಿಯಲ್ಲಿ ಭಜರಂಗದಳದ ಸಹಸಂಚಾಲಕ ಸಿ.ಕುಮಾರ್, ಕಾರ್ಯದರ್ಶಿ ಕೆ.ವಿ.ಜಗದೀಶ್, ಗ್ರಾ.ಪಂ ಸದಸ್ಯ ಬಿ.ಎಂ.ಪ್ರತೀಪ, ಗೋ ರಕ್ಷಕ ಪ್ರಮುಖ್ ಬಿ.ಎಸ್.ದಿಲೀಪ್ ಹಾಗೂ ಸದಸ್ಯ ಬಿ.ಹೆಚ್.ಪ್ರದೀಪ್ ಉಪಸ್ಥಿತರಿದ್ದರು.