Advertisement
2:29 AM Saturday 2-December 2023

ಪಾಲೂರು : ಶೌರ್ಯ ವಿಪತ್ತು ಘಟಕದಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ

17/02/2023

ನಾಪೋಕ್ಲು ಫೆ.17 : ಶೌರ್ಯ ವಿಪತ್ತು ಘಟಕದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು.
ಘಟಕದ ಪದಾಧಿಕಾರಿಗಳು ದೇವಾಲಯದ ಆವರಣದಲ್ಲಿದ್ದ ಕಸ, ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿದರು.
ಸಾಮಾಜಿಕ ಕಳಕಳಿ ಹೊಂದಿ, ಹತ್ತು ಹಲವು ಜನಪರ ಸೇವಾ ಕಾರ್ಯಗಳನ್ನು ನಿರ್ವಹಿಸುತ್ತಿರುವ ಈ ಘಟಕವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಘಟಕದ ಉಮಾಲಕ್ಷ್ಮಿ ಅವರ ನೇತೃತ್ವದಲ್ಲಿ ಸಂಯೋಜಕಿ ಬಾಳೆಯಡ ದಿವ್ಯ, ಶಂಕರ, ದಿಲೀಶ್, ಶ್ಯಾಮಲಾ, ಚಂದ್ರಕಲಾ, ಗೀತಾ, ರವಿ, ರಾಹುಲ್ ಸೇವೆಯಲ್ಲಿ ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ