ವಿರಾಜಪೇಟೆ : ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಜಾಗೃತಿ
17/02/2023

ವಿರಾಜಪೇಟೆ ಫೆ.16 : ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಸಂಸ್ಥೆಯಿಂದ ಕ್ಷಯ ರೋಗದ ಬಗ್ಗೆ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನು ಎಲ್‍ಇಡಿ ಪರದೆಯ ಮೂಲಕ ಪ್ರದರ್ಶಿಸಲಾಯಿತು.
ಈ ಸಂದರ್ಭ ಸಾರ್ವಜನಿಕ ಆಸ್ಪತ್ರೆ ವಿರಾಜಪೇಟೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
