Advertisement
4:26 AM Friday 8-December 2023

ಸುಂಟಿಕೊಪ್ಪ : ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ

17/02/2023

ಸುಂಟಿಕೊಪ್ಪ, ಫೆ.17: ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.18 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.
ವಿವಿಧ ಪೂಜಾ ಕೈಂಕಾರ್ಯಗಳು ನಡೆಯಲಿದ್ದು, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನೆರವೇರಲಿದೆ.
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿವಿಧ ವಿಶೇಷ ಪೂಜೆಗಳು ನೆರವೇರಲಿದೆ.
ಶನಿವಾರ ಸಂಜೆ 5 ಗಂಟೆಗೆ ಮಹಾಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ, ಪಂಚಕಳಸ, ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ನಂತರ ಈಶ್ವರ ಸ್ವಾಮಿಗೆ ರುದ್ರಾಭಿಷೇಕ, ಮಹಾಪುಷ್ಪಾಲಂಕಾರ, ಬಿಲ್ವಾರ್ಚನೆ, ಸಹಸ್ರ ದೀಪರಾಧನೆಯ ನಂತರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ತಿಳಿಸಿದ್ದಾರೆ.