ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದಲ್ಲಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ
17/02/2023

ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಣ್ಣ, ಗ್ರಾಮ ಪಂಚಾಯತ್ ಸದಸ್ಯರಾದ ನಿರ್ಮಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಿಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಅವರು ಉದ್ಘಾಟನೆ ನೆರವೇರಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಅವರು ಆಯುಷ್ ಸೇವಾ ಗ್ರಾಮದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಇಲಾಖೆ ವತಿಯಿಂದ ಕಾರ್ಯಕ್ರಮದಲ್ಲಿ ಔಷಧ ಸಸ್ಯಗಳ ವಿತರಣೆ ಮತ್ತು ಕ್ಯಾಲೆಂಡರ್‍ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರು ಡಾ.ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸಿಎಚ್‍ಒ ಹಾಗೂ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
