Advertisement
4:09 AM Friday 8-December 2023

ಕೊಡಗು ಜಿಲ್ಲಾ ಮೊಗೇರಾ ಸೇವಾ ಸಮಾಜ ಹಾಗೂ ಮೊಗೇರ ಗ್ರಾಮ ವಿಕಾಸ ಯೋಜನೆಯ ಜಿಲ್ಲಾ ಕಚೇರಿ ಫೆ.19ರಂದು ಉದ್ಘಾಟನೆ

17/02/2023

ಮಡಿಕೇರಿ ಫೆ.17 : ಕೊಡಗು ಜಿಲ್ಲಾ ಮೊಗೇರಾ ಸೇವಾ ಸಮಾಜ ಹಾಗೂ ಮೊಗೇರ ಗ್ರಾಮ ವಿಕಾಸ ಯೋಜನೆಯ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭ ಫೆ.19ರಂದು ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ದೇವಯ್ಯ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿ ಉದ್ಘಾಟನೆಗೊಳ್ಳಲಿದೆ. ನಂತರ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭ ಕುಶಾಲನಗರ ತಾಲ್ಲೂಕು ಸಮಿತಿಗೆ ಪದಾಧಿಕಾರಿಗಳ ಸೇರ್ಪಡೆ ಹಾಗೂ ಸುಂಟಿಕೊಪ್ಪ ಹೋಬಳಿ ಸಮಿತಿ ರಚನೆಯೂ ನಡೆಯಲಿದೆ. ಮೊಗೇರ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಮನವಿ ಮಾಡಿದ್ದಾರೆ.