Advertisement
11:49 AM Monday 4-December 2023

ಮಹಾಶಿವರಾತ್ರಿ : ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ

18/02/2023

ಮಡಿಕೇರಿ ಜ.18 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು.
ಮುಂಜಾನೆ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಜರುಗಿದವು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತಾಧಿಗಳು ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಸೇವೆ ಸಲ್ಲಿಸಿದರು.
ಸಂಜೆ ಭಕ್ತಾಧಿಗಳಿಂದ ದೀಪಲಂಕಾರ ಹಾಗೂ ತಾಯಿಯ ದರ್ಶನ ನೆರವೇರಲಿದೆ. ಜಗರಣೆ ಪ್ರಯುಕ್ತ ರಾತ್ರಿಯಿಂದ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.