ಕೆದಕಲ್ 7ನೇ ಮೈಲು ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವ
19/02/2023

ಸುಂಟಿಕೊಪ್ಪ ಫೆ.19 : ಕೆದಕಲ್ 7ನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ
ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಶೃದ್ಧಾಭಕ್ತಿಯಿಂದ ನಡೆಯಿತು.
ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ಅವರ ನೇತೃತ್ವದಲ್ಲಿ ಬೆಳಗ್ಗಿನಂದಲೇ ವಿಶೇಷ ಪೂಜೆ, ಹೋಮ ಹವನಗಳು ಜರುಗಿತು. ಮಹಾಮಂಗಳಾರತಿ ನಂತರ ಪ್ರಸಾದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಸಂಜೆ ಶಿವನ ಸ್ಮರಣೆ, ಭಜನೆಯೊಂದಿಗೆ ಭಕ್ತರು ಜಾಗರಣೆ ಮಾಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಎ.ಕರುಂಬಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.
