Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಚಿಕ್ಕ ಅಳುವಾರದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ : ಸ್ಥಳೀಯ ಸಮಸ್ಯೆ ಇತ್ಯರ್ಥಕ್ಕೆ ಹಂತ ಹಂತವಾಗಿ ಕ್ರಮ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚಿಕ್ಕ ಅಳುವಾರದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ : ಸ್ಥಳೀಯ ಸಮಸ್ಯೆ ಇತ್ಯರ್ಥಕ್ಕೆ ಹಂತ ಹಂತವಾಗಿ ಕ್ರಮ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಫೆಬ್ರವರಿ 20, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 : ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರದ ಚಿಕ್ಕಅಳುವಾರಮ್ಮ ದೇವಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ‘ಗ್ರಾಮ ವಾಸ್ತವ್ಯ’ ಕಾರ್ಯಕ್ರಮದಲ್ಲಿ ತೊರೆನೂರು ಗ್ರಾ.ಪಂ.ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಬೆಳಕು ಚೆಲ್ಲಿದರು.

ಈಗಾಗಲೇ ಊರುಡುವೆ ಪೈಸಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸುವುದು, ಆಶ್ರಯ ಮನೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸುವುದು, ಗ್ರಾಮದಿಂದ ಗ್ರಾಮಕ್ಕೆ ರಸ್ತೆ ಸಂಪರ್ಕಕ್ಕೆ ಹಂತ ಹಂತವಾಗಿ ಪರಿಹರಿಸುವುದು, ಕಾಡಾನೆ ಹಾವಳಿ ನಿಯಂತ್ರಣ ಸಂಬಂದ ಟ್ರಂಚ್ ನಿರ್ಮಾಣ ಹೀಗೆ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಈಗಾಗಲೇ ಪೈಸಾರಿ ಜಾಗದಲ್ಲಿ ಹಲವು ದಶಕಗಳಿಂದ ವಾಸುತ್ತಿರುವವರಿಗೆ 94ಸಿ ರಡಿ ಹಕ್ಕುಪತ್ರ ವಿತರಿಸಲಾಗುವುದು, ತೊರೆನೂರು ಗ್ರಾ.ಪಂ.ವ್ಯಾಪ್ತಿಯ 204 ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು, ಗ್ರಾಮ ಗ್ರಾಮಗಳ ಸಂಪರ್ಕ ಸಂಬಂಧ ರಸ್ತೆ ನಿರ್ಮಾಣಕ್ಕೆ ಹಂತ ಹಂತವಾಗಿ ಕೈಗೆತ್ತಿಕೊಳ್ಳುವುದು ಹೀಗೆ ಹಲವು ಸಾರ್ವಜನಿಕ ಕಾರ್ಯಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ ಎಂದರು.

ಸಭೆಯ ಆರಂಭದಲ್ಲಿ ಮಾತನಾಡಿದ ಸ್ಥಳೀಯರಾದ ವೆಂಕಟೇಶ್ ಅವರು ಚಿಕ್ಕಅಳುವಾರ ಗ್ರಾಮದಲ್ಲಿ ಕುಡಿಯುವ ನೀರು, ಬೀದಿ ದೀಪ, ರಸ್ತೆ ನಿರ್ಮಾಣ ಮತ್ತಿತರ ಕಾರ್ಯಗಳು ಆಗಬೇಕಿದ್ದು, ಸ್ಥಳ ಪರಿಶೀಲಿಸಿ ರಸ್ತೆ ನಿರ್ಮಾಣಕ್ಕೆ ಸಹಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ತೊರೆನೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವೀಣಾ ಅವರು ರಸ್ತೆ ನಿರ್ಮಾಣ ಸಂಬಂಧ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗಿದೆ. ಆದರೆ ಭೂ ಮಾಲೀಕರು ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹಳೇ ರಸ್ತೆ ಇದ್ದಲ್ಲಿ ಅಭಿವೃದ್ಧಿಪಡಿಸಬಹುದಾಗಿದೆ. ಹೊಸ ರಸ್ತೆ ನಿರ್ಮಿಸಬೇಕಾದಲ್ಲಿ ಎಲ್ಲರ ಒಪ್ಪಿಗೆ ಪಡೆದು ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದರು.

ಈ ಕುರಿತು ಸ್ಥಳೀಯ ಮಹಿಳೆಯರೊಬ್ಬರು ಒಂದು ಎತ್ತಿನ ಗಾಡಿಯು ಸಹ ಓಡಾಡಲು ರಸ್ತೆ ಇಲ್ಲ. ಇದರಿಂದ ಎಲ್ಲರ ಓಡಾಟಕ್ಕೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಾ.ಪಂ.ಇಒ ಅವರು ಸ್ಥಳ ಪರಿಶೀಲಿಸಿ ಕೂಡಲೇ ವರದಿ ನೀಡುವಂತೆ ಸೂಚಿಸಿದರು.

ಸ್ಥಳೀಯರೊಬ್ಬರು ಮಾತನಾಡಿ ಕಾಡಂಚಿನ ಗ್ರಾಮಗಳಲ್ಲಿ ಬೀದಿದೀಪ ಅಳವಡಿಸಬೇಕು. ಏತ ನೀರಾವರಿ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ.ಸಿಇಒ ಡಾ.ಎಸ್.ಆಕಾಶ ಅವರು ಕಾಡಂಚಿನ ಗ್ರಾಮಗಳಲ್ಲಿ ಬೀದಿ ದೀಪ ಅಳವಡಿಸಲಾಗುವುದು. ನೀರಾವರಿ ನಾಲೆ ಸರಿಪಡಿಸಲಾಗುವುದು. ಕುಡಿಯುವ ನೀರು ಇಲ್ಲದ ಕಡೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಹೇಳಿದರು.
ವಿವಿಧ ನೀರಾವರಿ ಯೋಜನೆಯಡಿ ಹೂಳು ತೆಗೆದ ನಂತರ ಮಣ್ಣನ್ನು ಸ್ಥಳಾಂತರ ಮಾಡಬೇಕು. ಆದರೆ ತೆಗೆದ ಮಣ್ಣನ್ನು ಅಲ್ಲಿಯೇ ಬಿಡುವುದರಿಂದ ಮತ್ತೆ ಮುಚ್ಚಿಕೊಳ್ಳುತ್ತದೆ. ಈ ಬಗ್ಗೆ ನೀರಾವರಿ ಇಲಾಖೆಯ ಎಂಜಿನಿಯರ್‍ಗಳು ಗಮನಹರಿಸಬೇಕು ಎಂದು ಸ್ಥಳೀಯರೊಬ್ಬರು ಒತ್ತಾಯಿಸಿದರು.
ಕಾಡಾನೆ ಹಾವಳಿಯಿಂದ ಬೆಳೆ ಹಾನಿಯಾಗಿದ್ದು, ಹೆಚ್ಚಿನ ಪರಿಹಾರ ನೀಡಬೇಕು ಎಂದು ಸ್ಥಳೀಯರೊಬ್ಬರು ಕೋರಿದರು. ಕೆಲವು ಕುಟುಂಬಗಳಿಗೆ ಸರ್ಕಾರದ ಸವಲತ್ತು ಇನ್ನೂ ಸಹ ತಲುಪಿಲ್ಲ. ಸುಮಾರು 75 ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದೇವೆ. ಆದ್ದರಿಂದ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸ್ಥಳೀಯ ಮಹಿಳೆಯೊಬ್ಬರು ಗ್ರಾಮ ವಾಸ್ತವ್ಯದಲ್ಲಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು.
ನೀರಾವರಿ ಬಳಕೆದಾರರ ಸಂಘದ ಸದಸ್ಯರಾದ ಪಾಂಡುರಂಗ ಅವರು ಕೆರೆ ಒತ್ತುವರಿಯಾಗಿರುವ ಜಾಗವನ್ನು ಸಂರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕೆರೆ ಒತ್ತುವರಿ ತೆರವುಗೊಳಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ 6 ಕಡೆಗಳಲ್ಲಿ ಕೆರೆ ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಇದನ್ನು ಸಹ ತೆರವುಗೊಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ನೊಕ್ಯ ಗ್ರಾಮ ಹೊರತು ಪಡಿಸಿ ಉಳಿದಂತೆ ಎಲ್ಲಾ ಕಡೆಗಳಲ್ಲೂ ಸಾಧ್ಯವಾದಷ್ಟು ಸ್ಮಶಾನಕ್ಕೆ ಭೂಮಿ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪಾಂಡುರಂಗ ಅವರು ಮಾತನಾಡಿ ಚಿಕ್ಕಅಳುವಾರದಲ್ಲಿರುವ ಕಾವೇರಿ ವಿಶ್ವವಿದ್ಯಾನಿಲಯಕ್ಕೆ ರಸ್ತೆ ಮಾರ್ಗವನ್ನು ಸರಿಪಡಿಸಬೇಕು ಎಂದು ಕೋರಿದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ,ಸತೀಶ ಅವರು ಎಲ್ಲಾ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ನಡೆಯಲಿದ್ದು, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕುಗಳು ಸಹ ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತಲಾ 10 ಕೋಟಿ ರೂ.ವೆಚ್ಚದಲ್ಲಿ ‘ತಾಲ್ಲೂಕು ಆಡಳಿತ ಭವನ’ ನಿರ್ಮಾಣವಾಗಲಿದೆ. ಕೊಡಗು ಜಿಲ್ಲೆಗೆ ಪ್ರತ್ಯೇಕ ವಿ.ವಿ ಕೂಡ ಘೋಷಣೆಯಾಗಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ಕಾರ್ಯ ರೂಪಕ್ಕೆ ಬರಲಿವೆ ಎಂದು ತಿಳಿಸಿದರು.
ಕಾವೇರಿ ನೀರಾವರಿ ನಿಗಮ ವ್ಯಾಪ್ತಿಯ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಬೃಹತ್ ನೀರಾವರಿ ಇಲಾಖೆಯ ಇಇ ಪುಟ್ಟಸ್ವಾಮಿ ಅವರು ಹೇಳಿದರು.
ಏತ ನೀರಾವರಿ ಮೂಲಕ ಕಾಲುವೆಗೆ ಸಮರ್ಪಕವಾಗಿ ನೀರು ಒದಗಿಸಬೇಕು ಎಂದು ಸಾರ್ವಜನಿಕರೊಬ್ಬರು ಒತ್ತಾಯಿಸಿದರು.
ತೊರೆನೂರು ಗ್ರಾಮದಲ್ಲಿ ಹಲವು ಕುಟುಂಬಗಳು ಕೈಮಗ್ಗವನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದು, ಇವರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ನೇಕಾರರ ಸಂಘದ ಅಧ್ಯಕ್ಷರಾದ ಪಾಂಡುರಂಗ ಅವರು ಮನವಿ ಮಾಡಿದರು.
ತೊರೆನೂರು ಗ್ರಾ.ಪಂ.ಅಧ್ಯಕ್ಷರಾದ ರೂಪಾ ಮಹೇಶ್ ಅವರು ಜಿಲ್ಲಾಡಳಿತವೇ ಕುಗ್ರಾಮಕ್ಕೆ ಬಂದು ಹಲವು ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ.25: ಸುಂಟಿಕೊಪ್ಪದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದರೂ ಮುಸ್ಲಿಂ ಬಾಂಧವರು ಮಹಮ್ಮದ್ ಪೈಗಂಬರರ 1501ನೇ ಜನ್ಮದಿನದ ಪ್ರಯುಕ್ತ ಈದ್…

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.