ಕರವೇ ಫ್ರಾನ್ಸಿಸ್ ಡಿಸೋಜಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ
21/02/2023

ಮಡಿಕೇರಿ ಫೆ.21 : ಕರವೇ ಫ್ರಾನ್ಸಿಸ್ ಡಿಸೋಜ ಅವರಿಗೆ ಉತ್ತಮ ಸಮಾಜಸೇವೆಗಾಗಿ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮಂಜುಶ್ರೀ ಸಾಂಸ್ಕೃತಿಕ ಸೇವಾ ಟ್ರಸ್ಟ್ ನ 3ನೇ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಮಂಜು ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಂಜುಳಾ ಅವರಿಗೆ ಅಭಿನಂದನೆ ಸಲ್ಲಿಸಿದರು.
