Advertisement
3:52 AM Friday 8-December 2023

ಮಡಿಕೇರಿ : ಸವಿತಾ ಸಮಾಜದಿಂದ ಜಿಲ್ಲಾ ಮಟ್ಟದ ಕ್ರೀಡೋತ್ಸವ

21/02/2023

ಮಡಿಕೇರಿ ಫೆ.21 : ಮಡಿಕೇರಿ ತಾಲೂಕು ಸವಿತಾ ಸಮಾಜದ ವತಿಯಿಂದ ಫೆ.26 ರಿಂದ 28ರ ವರೆಗೆ ಜಿಲ್ಲಾ ಮಟ್ಟದ ಕ್ರೀಡೋತ್ಸವ ನಡೆಯಲಿದೆ ಎಂದು ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಫೆ.26, 27 ಹಾಗೂ 28 ರಂದು ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಶಟಲ್ ಬ್ಯಾಡ್‍ಮಿಂಟನ್, ಸೂಪರ್ ಕ್ರಿಕೆಟ್, ಥ್ರೋಬಾಲ್ ಪಂದ್ಯಾವಳಿ ನಡೆಯಲಿದ್ದು, ಮಕ್ಕಳಿಗೆ ಕಾಳು ಹೆಕ್ಕುವುದು, ಕಪ್ಪೆ ಜಿಗಿತ, 50 ಮೀ. ಓಟ, 100 ಮೀ. ಓಟ, 200 ಮೀ. ಓಟ ಹಾಗೂ ಮಹಿಳೆಯರಿಗೆ ಹಾಗೂ ಪುರುಷರಿಗೆ ಭಾರದ ಗುಂಡು ಎಸೆತ, ಹಗ್ಗಜಗ್ಗಾಟ, 50 ವರ್ಷ ಮೇಲ್ಪಟ್ಟ ಪುರುಷ, ಮಹಿಳೆಯರಿಗೆ ಕಣ್ಣು ಕಟ್ಟಿ ಮಡಿಕೆ ಒಡೆಯುವುದು, ಬಾಂಬ್ ಇನ್ ದಿ ಸಿಟಿ ಸೇರಿದಂತೆ ಇತರೆ ಕ್ರೀಡಾಕೂಟಗಳು ನಡೆಯಲಿದೆ ಎಂದು ತಿಳಿಸಿದರು.
ತಾಲೂಕು ಅಧ್ಯಕ್ಷ ಎಂ.ಟಿ.ಮಧು ಮಾತನಾಡಿ, ಫೆ.26 ರಂದು ಬೆಳಿಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾವಳಿ ಆರಂಭವಾಗಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ನಂದಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪತ್ರಕರ್ತ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಸಮಾಜದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಫೆ.27 ರಂದು ವಿವಿಧ ಕ್ರೀಡಾಕೂಟ ಉದ್ಘಾಟನೆ ಹಾಗೂ ಸವಿತಾ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ತಾಲೂಕು ಸವಿತಾ ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್, ಉಪಾಧ್ಯಕ್ಷ ಶಿವಾಜಿ ಹಾಗೂ ತಾಲೂಕು ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಫೆ.28 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಶ್ ಕುಮಾರ್, ರಾಜ್ಯ ಸವಿತಾ ಸಮಾಜದ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯಧ್ಯಕ್ಷ ಕಿರಣ್ ಕುಮಾರ್, ಸಮಾಜ ಸೇವಕರಾದ ಮಂಥರ್ ಗೌಡ, ನಾಪಂಡ ಮುತ್ತಪ್ಪ, ಕಾಂಗ್ರೆಸ್ ಮುಖಂಡ ಕೆ.ಎಸ್.ಪೊನ್ನಣ್ಣ, ಹಾಸನ ಸವಿತ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ಸವಿತಾ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್, ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ, ಮಹಿಳಾ ಘಟಕದ ಅಧ್ಯಕ್ಷೆ ಆರ್.ಜಿ.ವಸಂತಿ ಸೇರಿದಂತೆ ಮತ್ತಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ಎಂ.ಜಿ.ಚರಣ್, ಮಹಿಳಾ ಘಟಕದ ಅಧ್ಯಕ್ಷೆ ಆರ್.ಬಿ.ವಸಂತಿ, ನಗರಾಧ್ಯಕ್ಷ ಟಿ.ಜಿ.ಸಂದೇಶ್, ಕಾರ್ಯದರ್ಶಿ ಚರಣ್ ಉಪಸ್ಥಿತರಿದ್ದರು.