Advertisement
5:14 AM Friday 8-December 2023

ಫೆ.22 ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ : ಜೆಡಿಎಸ್ ಮುಖಂಡ ಸಂಕೇತ್ ಪೂವಯ್ಯ ಕಾಂಗ್ರೆಸ್ ಸೇರ್ಪಡೆ

21/02/2023

ಮಡಿಕೇರಿ ಫೆ.21 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವು ಫೆ.22 ರಂದು ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪ ದಿಂದ ವಿರಾಜಪೇಟೆಗೆ ಬೈಕ್ ರ‍್ಯಾಲಿ ನಡೆಯಲಿದ್ದು, 10.30ಕ್ಕೆ  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ  ವಿರಾಜಪೇಟೆ ಸೆರನಿಟಿ ಸಭಾಂಗಣದಲ್ಲಿ ಸಮಾವೇಶ  ನಡೆಯಲಿದೆ.

ಸಮಾವೇಶದಲ್ಲಿ ಎಐಸಿಸಿ ಉಸ್ತುವಾರಿ  ರೋಸಿ ಜಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ  ಆರ್ ಧ್ರುವನಾರಾಯಣ್, ಕೆಪಿಸಿಸಿ ಉಪಾಧ್ಯಕ್ಷ  ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ  ಎ.ಎಸ್ ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ  ಹಾಗೂ  ಇತರ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ಜೆಡಿಎಸ್ ಮುಖಂಡ  ಸಂಕೇತ್ ಪೂವಯ್ಯ  ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾಗಲಿದ್ದಾರೆ.