Advertisement
12:27 PM Monday 4-December 2023

ಕೊಡಗರಳ್ಳಿಯಲ್ಲಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ : ಪ್ರತಿ ದಿನ ಯೋಗಭ್ಯಾಸ ಮಾಡಲು ಕರೆ

22/02/2023

ಮಡಿಕೇರಿ ಫೆ.22 : ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಕೊಡಗರಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನೀತಾ ಹರೀಶ್, ಚನ್ನಬಸವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ. ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್‍ಕುಮಾರ್ ಅವರು ಯೋಗದ ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು ಮತ್ತು ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.