Advertisement
9:26 AM Sunday 3-December 2023

ಬೋಯಿಕೇರಿ-ಇಬ್ಬನಿವಳವಾಡಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ

22/02/2023

ಮಡಿಕೇರಿ ಫೆ.22 : ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಕ್ಕಳಿಗೆ ಯೋಗದ ಕುರಿತು ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗ್ರಾ.ಪಂ.ಅಧ್ಯಕ್ಷರಾದ ಜಯಣ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ಶಾಲೆಯ ಮುಖ್ಯೋಪಾಧ್ಯಾಯರಾದ ರಾಜು, ಶಾಲೆಯ ಶಿಕ್ಷಕರು, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿಎಚ್‍ಒ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.