Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಜನಸ್ಪಂದನ ಸಭೆ : ಕಾಂಗ್ರೆಸ್ ಬಲಪ್ರದರ್ಶನ : ತೆನೆ ಬಿಟ್ಟು ಕೈಹಿಡಿದ ಸಂಕೇತ್ ಪೂವಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಜನಸ್ಪಂದನ ಸಭೆ : ಕಾಂಗ್ರೆಸ್ ಬಲಪ್ರದರ್ಶನ : ತೆನೆ ಬಿಟ್ಟು ಕೈಹಿಡಿದ ಸಂಕೇತ್ ಪೂವಯ್ಯ

ಫೆಬ್ರವರಿ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.22 : ರಾಜ್ಯ ರಾಜಕೀಯಕ್ಕೆ ಮಹತ್ತರವಾದ ಮತ್ತೊಂದು ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹಂತದಲ್ಲಿ, ಕೊಡಗು ಜಿಲ್ಲಾ ಕಾಂಗ್ರೆಸ್ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಸಂಘಟಿಸುವ ಮೂಲಕ ತನ್ನ ಬಲ ಪ್ರದರ್ಶನ ನಡೆಸಿದೆ.
ನಗರದ ಸೆರಿನಿಟಿ ಸಭಾಂಗಣದಲ್ಲಿ ಆಯೋಜಿತ ಕಾಂಗ್ರೆಸ್ ಕಾರ್ಯಕರ್ತರ ಜನಸ್ಪಂದನ ಸಭೆಯಲ್ಲಿ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಮುಂದಿನ ಚುನಾವಣೆಯನ್ನು ಎದುರಿಸಲು ನಾಯಕರುಗಳಿಗೆ ಶಕ್ತಿ ತುಂಬಿದರು. ಇದೇ ಹಂತದಲ್ಲಿ ಜಿಲ್ಲಾ ಜೆಡಿಎಸ್‍ನ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮೇರಿಯಂಡ ಸಂಕೇತ್ ಪೂವಯ್ಯ ಅವರು, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಮುಂಬರುವ ಚುನಾವಣೆ ಮತ್ತಷ್ಟು ರಂಗೇರುವುದನ್ನು ಖಚಿತಪಡಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಕೇರಳದ ಶಾಸಕ ರೋಸಿ ಜಾನ್ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಜನತೆ ಆಶೀರ್ವದಿಸಿ ಅಧಿಕಾರಕ್ಕೆ ತಂದಲ್ಲಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಗೌರವ ಧನವನ್ನು ನೀಡಲಾಗುತ್ತದೆ. ವಿರಾಜಪೇಟೆ, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಎಲ್ಲಾ ನಿವಾಸಿಗಳಿಗೆ ಉಚಿತ ವಿದ್ಯುತ್ ಕಾರ್ಡ್ ನೀಡಲಿದೆಯೆಂದು ಭರವಸೆಯನನ್ನಿತ್ತರು.
ಕೊಡಗಿನಲ್ಲಿ ಆರೋಗ್ಯ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿಲ್ಲ. ಸ್ಥಳೀಯರ ಬೇಡಿಕೆಯ ‘ಮಲ್ಟಿ ಸ್ಪೆμÁಲಿಟಿ ಆಸ್ಪತ್ರೆ’ ಮರೀಚಿಕೆಯಾಗಿದೆ ಎಂದು ಹೇಳಿದ ಅವರು, ಈ ಬಾರಿ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆಂದು ದೃಢವಾಗಿ ನುಡಿದರು.
ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ವೀಕ್ಷಕರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಮುಂಬರಲಿರುವ ವಿಧಾನ ಸಭಾ ಚುನಾವಣೆಯನ್ನು ಟಿಪ್ಪು ಮತ್ತು ಸಾವರ್ಕರ್ ನಡುವಿನ ಚುನಾವಣೆಯೆಂದು ಬಿಜೆಪಿ ಜನರ ಹಾದಿ ತಪ್ಪಿಸುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು.
ಪ್ರಸ್ತುತ ಬಿಜೆಪಿ ಆಡಳಿತಾವಧಿಯಲ್ಲಿ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನ ಮುಖಿಯಾಗಿದೆ. ಅಡುಗೆ ಅನಿಲ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಪರಿತಪಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಡುಗೆ ಅನಿಲಕ್ಕೆ ಸಹಾಯಧನವಿತ್ತು, ಇದರಿಂದ ಶ್ರೀಸಾಮಾನ್ಯನಿಗೆ ಕಡಿಮೆ ಬೆಲೆಗೆ ಅಡುಗೆ ಅನಿಲ ದೊರಕುತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಾರ್ಷಿಕ ರೈತರ ಖಾತೆಗೆ 50 ಸಾವಿರ ರೂ. ಬರಲಿದೆಯೆಂದು ಭರವಸೆ ನೀಡಿದ ಅವರು, ಬಿಜೆಪಿ ಸರ್ಕಾರ ಕೇವಲ ರೈತರ ಕಣ್ಣೊರೆಸುವ ನಾಟಕ ಆಡುತ್ತಿದೆಯೆಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಜೆಡಿಎಸ್‍ನಲ್ಲಿದ್ದಾಗ ತಾನು, ಚುನಾವಣೆಯಲ್ಲಿ ಸೋಲುವುದು ಗೊತ್ತಿದ್ದರೂ ಸ್ಪರ್ಧಿಸಿದ್ದೆ ಎಂದು ತಿಳಿಸಿದರು.
ಬಿಜೆಪಿಯ ಡಬ್ಬಲ್ ಇಂಜಿನ್ ವಾಹನದಲ್ಲಿ ಡೀಸೆಲ್ ಇಲ್ಲ. ನಾಲ್ಕು ಟೈರ್ ಪಂಕ್ಚರ್ ಆಗಿದೆ. ಈ ಬಾರಿ ಕೊಡಗಿನಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕೊಡಗಿನ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನಮಾನ ನೀಡದೆ ಡಬ್ಬಲ್ ಇಂಜಿನ್ ಸರ್ಕಾರ ಜಿಲ್ಲೆಗೆ ಅನ್ಯಾಯವೆಸಗಿದೆ. ಕಾಫಿ ಬೆಳೆಗಾರರು, ವರ್ತಕರು, ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ವಾಣಿಜ್ಯ ಸಚಿವಾಲಯ ಕಾಫಿ ಬೆಳೆಗಾರರನ್ನು ಕಡೆಗಣಿಸಿದೆ ಎಂದು ಆರೋಪಿಸಿದರು.
ಈ ಬಾರಿ ಕೊಡಗಿನಲ್ಲಿ ಬದಲಾವಣೆಯ ಹೊಸ ಶಖೆ ಆರಂಭವಾಗಲಿದೆ. ಜನಾನುರಾಗಿ ಎ.ಎಸ್.ಪೊನ್ನಣ್ಣ ಅವರು ಜಯಭೇರಿ ಭಾರಿಸಲಿದ್ದಾರೆ ಎಂದರು.
ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಕೊಡಗು ಕಾಂಗ್ರೆಸ್ ಉಸ್ತುವಾರಿ ಲಕ್ಷ್ಮಣ್, ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಡಾ.ಮಂಥರ್ ಗೌಡ ಮಾಜಿ ಎಂಎಲ್‍ಸಿಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿಯ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಪ್ರಸನ್ನ, ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಪಿ.ಸಿ.ಹಸೈನಾರ್, ಮೀದೇರಿರ ನವೀನ್, ನಾಪೋಕ್ಲುವಿನ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ನೆರವಂಡ ಉಮೇಶ್, ಕೆ.ಬಿ.ಶಾಂತಪ್ಪ, ಸುರಯ್ಯಾ ಅಬ್ರಾರ್, ಬಾನಂಡ ಪ್ರಥ್ಯು, ಪೆಮ್ಮಂಡ ಪೊನ್ನಪ್ಪ, ತಾರಾ ಅಯ್ಯಮ್ಮ, ಕೊರಕುಟ್ಟೀರ ಸರ ಚಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಬೈಕ್ ರ‍್ಯಾಲಿ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.