ತೋಟದ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಲು ಸೂಚನೆ
22/02/2023

ಮಡಿಕೇರಿ ಫೆ.22 : ಕೊಡಗು ಜಿಲ್ಲೆಯ ಹಲವು ತೋಟಗಳಲ್ಲಿ ಕನಿಷ್ಟ ವೇತನಕ್ಕಿಂತ ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಪದೇ ಪದೇ ವಿವಿಧ ಕಾರ್ಮಿಕ ಸಂಘಟನೆಗಳಿಂದ ದೂರು ಕೇಳಿಬರುತ್ತಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಹಾಗೂ ಕಾರ್ಮಿಕ ಇಲಾಖೆ ಕಚೇರಿಗೂ ದೂರುಗಳು ಬರುತ್ತಿರುವ ಹಿನ್ನೆಲೆ ತೋಟದ ಮಾಲೀಕರು ತಮ್ಮ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನವನ್ನು ಪಾವತಿ ಮಾಡಬೇಕಿದೆ.
2022-23 ರ ಸಾಲಿಗೆ ತೋಟ ಕಾರ್ಮಿಕರಿಗೆ ದಿನದ ಎಂಟು ಗಂಟೆಯ ಕೆಲಸಕ್ಕೆ ರೂ.376.77 ವೇತನವನ್ನು ನಿಗಧಿಪಡಿಸಲಾಗಿದೆ. ಕನಿಷ್ಠ ವೇತನಕ್ಕಿಂತ ಕಡಿಮೆ ವೇತನ ನೀಡುತ್ತಿರುವ ಮಾಲೀಕರ ವಿರುದ್ಧ ಕ್ಲೇಮ್ ಅರ್ಜಿಯನ್ನು ಕಾರ್ಮಿಕರು ನೇರವಾಗಿ ಅಥವಾ ತಮ್ಮ ಪ್ರತಿನಿಧಿಗಳ ಮೂಲಕ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸಬಹುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ವಿಲ್ಮ ಎಲಿಜಬೆತ್ ತಾವ್ರೋ ಅವರು ತಿಳಿಸಿದ್ದಾರೆ.
