ನಾಪೋಕ್ಲು : ಫೆ.25 ರಂದು ಶ್ರೀ ಪೊನ್ನುಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆ
22/02/2023

ನಾಪೋಕ್ಲು ಫೆ.22 : ಹಳೇ ತಾಲೂಕಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆಯು ಫೆ.25 ರಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪೂರ್ವಾಹ್ನ 9ಗಂಟೆಗೆ ದೇವಾಲಯದ ಆವರಣದಲ್ಲಿ ನಡೆಯಲಿರುವ ವಾರ್ಷಿಕ ಮಹಾಸಭೆಗೆ ಸದಸ್ಯರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದ್ದು, ಸಂಜೆ 6 ಗಂಟೆಗೆ ಮುತ್ತಪ್ಪ ದೇವರ ವಿಶೇಷ ವೆಲ್ಲಾಟಂ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ಕೋರಿದೆ.
ವರದಿ :ಝಕರಿಯ ನಾಪೋಕ್ಲು
