ಚೇರಂಬಾಣೆ : ಶ್ರೀ ರಾಜರಾಜೇಶ್ವರಿ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಮಡಿಕೇರಿ ಫೆ.22 : ಚೇರಂಬಾಣೆ-ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ ಹಾಗೂ ಚೆನ್ನೈನ ಸೆಂಟ್ರಡೋ ಟೆಕ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮಂಜುನಾಥ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ವಿಜ್ಞಾನದ ಕುರಿತಾದ ಹೊಸ ಹೊಸ ಆಧುನಿಕ ಆವಿಷ್ಕಾರಗಳನ್ನು ಈ ಅಟಲ್ ಟಿಂಕರಿಂಗ್ ಲ್ಯಾಬೋರೇಟರಿಯಲ್ಲಿ ಪ್ರಯೋಗಗಳನ್ನು ಮಾಡುವ ಮೂಲಕ ವಿಜ್ಞಾನದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಂತೆ ಕರೆಕೊಟ್ಟರು.
ನಿವೃತ್ತ ಮುಖ್ಯ ಶಿಕ್ಷಕ ಕೆ.ಎಸ್. ರಾಮಮೂರ್ತಿ ಮಾತನಾಡಿ, ಅಟಲ್ ಟಿಂಕರಿಂಗ್ ಲ್ಯಾಬೊರೇಟರಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾವೇ ತಯಾರಿಸಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿ
ಅತಿಥಿಗಳ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಹರೀಶ್, ಮಾರುತಿ ಆರೇರ, ಸಿಆರ್‌ಪಿ ವೀಣಾ ರೈ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಕುಟ್ಟೇಟಿರ ಕುಂಞ್ಞಪ್ಪ, ಮೊಟ್ಟೆಯಂಡ ತಮ್ಮಯ್ಯ, ಶಾಲಾ ವ್ಯವಸ್ಥಾಪಕರಾದ ನಾಟೊಳoಡ ವಿಜು, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
