Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಎಮ್ಮೆಮಾಡು ಉರೂಸ್ : :ಫೆ.27 ಮತ್ತು ಮಾ.3ರಂದು ಪಟ್ಟಣದಲ್ಲಿ ವಾಹನ ನಿಲುಗಡೆ ನಿಷೇಧ : C I ಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಮ್ಮೆಮಾಡು ಉರೂಸ್ : :ಫೆ.27 ಮತ್ತು ಮಾ.3ರಂದು ಪಟ್ಟಣದಲ್ಲಿ ವಾಹನ ನಿಲುಗಡೆ ನಿಷೇಧ : C I ಶೇಖರ್

ಫೆಬ್ರವರಿ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.23 :  ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಫೆ.27  ಮತ್ತು ಮಾ.3 ರಂದು ಬೆಳಗ್ಗೆ 6ಗಂಟೆಯಿಂದ ರಾತ್ರಿ 9ರ ವರೆಗೆ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್ ಮನವಿ ಮಾಡಿದರು.

ಉರೂಸ್ ಪ್ರಯುಕ್ತ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಸರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹಲವಾರು ಭಕ್ತಾದಿಗಳು ಆಗಮಿಸುತ್ತಿದ್ದು ಫೆ.27 ರಂದು ನಾಪೋಕ್ಲು ಸಂತೆ ದಿನಕೂಡ ಆಗಿದ್ದು ಪಟ್ಟಣದಲ್ಲಿ ವಾಹನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸಲು ನಾಪೋಕ್ಲು ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ವಾಹನಗಳನ್ನು ಹಳೆ ತಾಲೂಕುವಿನಿಂದ ನಾಪೋಕ್ಲು ಸಂತೆ ಮಾರುಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಈ ದಿನ  ವಾಹನಗಳ ನಿಲುಗಡೆಗೆ ಬದಲಿ ವ್ಯವಸ್ಥೆಮಾಡಲಾಗಿದ್ದು, ನೆಲಜಿ,ಕೊಳಕೇರಿ,ಕಕ್ಕಬ್ಬೆ ಭಾಗದಿಂದ ಸಂತೆಗೆ ಬರುವ ಜನರು ಹಳೆ ತಾಲೂಕು ಸರ್ಕಾರಿ ಶಾಲಾ ಮೈದಾನದಲ್ಲಿ ತಮ್ಮ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಬೇತು ರಸ್ತೆ, ಪೊಲೀಸ್ ಠಾಣಾ ಮೈದಾನ, ನಾಡ ಕಛೇರಿ ಆವರಣ, ಚೆರಿಯ ಪರಂಬು ರಸ್ತೆಯಲ್ಲಿ ಇತರೆ ಕಡೆಗಳಿಂದ ಬರುವ ಸಾರ್ವಜನಿಕರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಸಾರ್ವಜನಿಕರ ಪರವಾಗಿ ಮಾತನಾಡಿದ ಬಿಜೆಪಿ ಮುಖಂಡ ಕುಂದ್ಯೋಳಂಡ ರಮೇಶ್ ಮುದ್ದಯ್ಯ ಎಮ್ಮೆಮಾಡು ಉರೂಸ್ ಸಮಾರಂಭವು ಎಲ್ಲಾ ಜನಾಂಗದವರನ್ನು ಒಗ್ಗೂಡಿಸುವ ಒಂದು ಕೇಂದ್ರವಾಗಿದೆ. ಇದ್ದಕ್ಕೆ ನಾವು ಎಲ್ಲಾರೀತಿಯಲ್ಲಿ ಪ್ರತಿ ವರ್ಷ ಸಹಕಾರ ನೀಡುತ್ತಾಬಂದಿದ್ದೇವೆ ಎಂದರು. ನಾಪೋಕ್ಲು ಪಟ್ಟಣದಲ್ಲಿ ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಬೆಳಗ್ಗೆಯಿಂದ ಸಂಜೆವರೆಗೆ ಅಂಗಡಿಗಳ ಮುಂದೆ ನಿಲ್ಲಿಸುವುದರಿಂದ ಸಾರ್ವಜನಿಕರ ವಾಹನ ನಿಲುಗಡೆಗೆ ತೊಂದರೆಯಾಗುತ್ತಿದೆ. ಇದರಿಂದ ಪ್ರತಿ ದಿನ ಪಟ್ಟಣದಲ್ಲಿ ವಾಹನ ದಟ್ಟನೆ ಹೆಚ್ಚಾಗುತ್ತಿದೆ ಇದಕ್ಕೆ ಕ್ರಮವಹಿಸಬೇಕೆಂದರು.

ನಾಪೋಕ್ಲು ಗ್ರಾ.ಪಂ.ಸದಸ್ಯ ಪ್ರತೀಪ್ ಮಾತನಾಡಿ ಉರೂಸ್ ಅಂಗವಾಗಿ ಸೋಮವಾರ ಎಮ್ಮೆಮಾಡು ಕೂರುಳಿ ಮಾರ್ಗವಾಗಿ ಏಕ ಮುಖ ಸಂಚಾರಕ್ಕೆ ಪ್ರತಿ ವರ್ಷ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದರೆ ಈ ವರ್ಷ ಕೂರುಳಿ ರಸ್ತೆಯು ನೂತನವಾಗಿ ಕಾಂಕ್ರೆಟ್ ಡಾಂಬರೀಕರಣವಾಗಿದ್ದು ವಾಹನಗಳ ಸಂಚಾರದ ವೇಗ ಹೆಚ್ಚಾಗಿದೆ. ಇದರಿಂದ ಆಪಘಾತ ವಾಗುವ ಸಾಧ್ಯತೆ ಹೆಚ್ಚಾಗಿದ್ದು ಇದಕ್ಕೆ ವೇಗ ನಿಯಂತ್ರಿಸಲು ಬ್ಯಾರಿಗೇಟ್ ವ್ಯವಸ್ಥೆ ಕಲ್ಪಿಸಬೇಕೆಂದು ಗಮನ ಸೆಳೆದರು.

ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಮಾತನಾಡಿ ಎಮ್ಮೆಮಾಡು ಊರೂಸ್ ಕಾರ್ಯಕ್ರಮಕ್ಕೆ ನಾಪೋಕ್ಲು ವಿಭಾಗದ ಸರ್ವಜನಾಂಗದವರು ಎಲ್ಲಾರೀತಿಯಲ್ಲಿ ಸಹಕಾರ ನಿಡುತ್ತಿದ್ದಾರೆ.ಹೊರ ಜಿಲ್ಲೆ, ರಾಜ್ಯಗಳಿಂದ ಸಮಾರಂಭಕ್ಕೆ ಬರುವ ಭಕ್ತಾದಿಗಳಿಗೆ ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಇಲಾಖೆಯವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ಗ್ರಾ. ಪಂ.ಸದಸ್ಯ ಚಕ್ಕೇರ ಇಸ್ಮಾಯಿಲ್ ದ್ವನಿಗೂಡಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ವೃತ ನಿರೀಕ್ಷಕ ಶೇಖರ್ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಯುತ್ತವೆ, ಉರೂಸ್ ಸಮಾರಂಭಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.ನಾಪೋಕ್ಲು ಪಟ್ಟಣದ ಸಂಚಾರಿ ಅವ್ಯವಸ್ಥೆಗಳ ಬಗ್ಗೆ ಉರೂಸ್ ಸಮಾರಂಭ ಮುಗಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ನಾಪೋಕ್ಲು ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ಗೋಪಾಲಕೃಷ್ಣ,ನಾಪೋಕ್ಲು ಗ್ರಾ.ಪಂ.ಉಪಾಧ್ಯಕ್ಷ ಮಹಮ್ಮದ್, ಸದಸ್ಯ ಸಾಬಾ ತಿಮ್ಮಯ್ಯ, ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷ ನಾಗರಾಜ್,ಎಮ್ಮೆಮಾಡು ಗ್ರಾ. ಪಂ. ಮಾಜಿ ಅಧ್ಯಕ್ಷ ಆಲಿ ಕುಟ್ಟಿ, ಎಮ್ಮೆಮಾಡು ಗ್ರಾ.ಪಂ. ಸದಸ್ಯರಾದ ಗಫೂರ್, ಯೂಸುಫ್,ಭಜರಂಗ ದಳದ ರಾಧಾಕೃಷ್ಣ ರೈ,ಪ್ರವೀಣ್,ಆಟೋ ಚಾಲಕರು, ವರ್ತಕರು, ಠಾಣೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.

ವರದಿ :ಝಕರಿಯ ನಾಪೋಕ್ಲು  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಲ್ಲ. ಅದರ ಅಗತ್ಯವೂ ಜಿಲ್ಲೆಗೆ ಇಲ್ಲ ಎಂದು ಮಡಿಕೇರಿ…

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.