Advertisement
4:11 AM Saturday 2-December 2023

ಫೆ.28 ರಂದು ಸಂತಕವಿ ಶ್ರೀ ಸರ್ವಜ್ಞ ಜಯಂತಿ

23/02/2023

ಮಡಿಕೇರಿ ಫೆ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ತ್ರಿಪದಿಕವಿ ಶ್ರೀ ಸರ್ವಜ್ಞ ಜಯಂತಿ’ ಕಾರ್ಯಕ್ರಮವು ಫೆಬ್ರವರಿ, 28 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕುಲಾಲ(ಕುಂಬಾರ) ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ.ಡಿ.ನಾಣಯ್ಯ, ಗೋಣಿಕೊಪ್ಪ ಸಾಹಿತಿ ಡಾ.ಜೆ.ಸೋಮಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.