ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಕೆ.ಎಂ.ಸತೀಶ್ ಕುಮಾರ್ ಅಧಿಕಾರ ಸ್ವೀಕಾರ
24/02/2023

ಮಡಿಕೇರಿ ಫೆ.24 : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ.ಕೆ.ಎಂ.ಸತೀಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಅವರು ಅಭಿನಂದಿಸಿದರು.
