ಪೌರ ಕಾರ್ಮಿಕರ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
24/02/2023

ಮಡಿಕೇರಿ ಫೆ.24 : ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ ನಗರಸಭೆ, ಕುಶಾಲನಗರ ಹಾಗೂ ವಿರಾಜಪೇಟೆ ಪುರಸಭೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರು, ಲೋಡರ್ಸ್ ಹಾಗೂ ಕ್ಲೀನರ್ಸ್ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಹಾಗೂ ಯೋಜನಾ ನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ಕಚೇರಿ ವೆಬ್‍ಸೈಟ್‍ಗಳಲ್ಲಿ ಪ್ರಕಟಿಸಲಾಗಿದೆ.
ಈ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ, 22 ರಿಂದ 07 ದಿನದೊಳಗೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು/ ಮುಖ್ಯಾಧಿಕಾರಿ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಜಿಲ್ಲಾಧಿಕಾರಿ ಅವರ ಕಚೇರಿಗೆ ದಾಖಲಾತಿಗಳೊಂದಿಗೆ ಸಲ್ಲಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ತಿಳಿಸಿದ್ದಾರೆ.
