Advertisement
12:04 AM Saturday 2-December 2023

ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಗೆ ಚಾಲನೆ

24/02/2023

ಮಡಿಕೇರಿ ಫೆ.24 : ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯುದ್ ಹಸನ್ ಸಖಾಫ್ ಹಳ್ರಮಿ(ರ) ಮತ್ತು ಇತರ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಗೆ ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು.

ಧ್ವಜಾರೋಹಣಕ್ಕೂ ಮೊದಲು  ಸಾಮೂಹಿಕ ನಮಾಜಿನ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಉರೂಸ್‍ನ್ನು ಕೋಝಿಕೋಡ್ ಖಾಝಿಗಳಾದ ಸಯ್ಯಿದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್ ಅವರು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಕೊಡಗಿನ ನಾಯಿಬ್ ಖಾಝಿ ಶಾದುಲಿ ಫೈಝಿ ವಹಿಸಿದ್ದು, ಸಂಜೆ 8 ಗಂಟೆಗೆ ಶಾಫಿ ಸಖಾಫಿ ಮುಂಡಂಬ್ರ ಅವರಿಂದ ಧಾರ್ಮಿಕ ಪ್ರವಚನ ನಡೆಯಲಿದೆ.

ಫೆ.25 ರಂದು ಸಯ್ಯದ್ ಅಬ್ದುಲ್ ರಹ್ನಾನ್ ಇಂಜಿಚ್ಚಿಕೋಯ ಅಲ್ ಬುಖಾರಿ ನೇತೃತ್ವದಲ್ಲಿ ದ್ಸಿಕ್‍ರ್ ಹಲ್ಖಾ ಮತ್ತು ಮತ ಪ್ರವಚನ ನಡೆಯಲಿದೆ.