ಬಿ.ಬಿ.ರಾಮಕೃಷ್ಣ ಬೋರ್ಕರ್ ಗೆ ಡಾಕ್ಟರೇಟ್ ಪದವಿ ಪ್ರದಾನ
25/02/2023

ವಿರಾಜಪೇಟೆ ಫೆ.25 : ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದ ರಾಮನಗರದ ಬಿ.ಬಿ. ರಾಮಕೃಷ್ಣ ಬೋರ್ಕರ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 22ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ರಾಮಕೃಷ್ಣ ಬೋರ್ಕರ್ ಪ್ರಸ್ತುತ ಪೊನ್ನಂಪೇಟೆಯ ಸಿಐಟಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ನ್ಯಾಕ್ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಬೇಟೋಳಿ ಶ್ರೀ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೇಟೋಳಿಯ ಬಿ.ವಿ. ಭವಾನಿ ಶಂಕರ್ ಬೋರ್ಕರ್ ಅವರ ಪುತ್ರರಾಗಿದ್ದಾರೆ.
