ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಸುಂಟಿಕೊಪ್ಪದಲ್ಲಿ ವಿವಿಧ ಇಲಾಖೆಗಳಿಂದ ಬೆಂಬಲ
25/02/2023

ಸುಂಟಿಕೊಪ್ಪ ಫೆ.25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆ ಶಿಕ್ಷಕರ ಸಂಘ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಭಿತ್ತಿ ಪತ್ರ ಹಿಡಿದು ಬೆಂಬಲ ಸೂಚಿಸಿದರು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿಸೋಮಶೇಖರ್, ತಾಲೂಕು ಪ್ರಾಥಮಿಕ ಶಾಲಾ ಉಪಾಧ್ಯಕ್ಷೆ ಸೌಭಾಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಎನ್‍ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿಗೊಳಿಸುವಂತೆ
ಒತ್ತಾಯಿಸಿ ಭಿತ್ತಿ ಪತ್ರವನ್ನು ಪ್ರದರ್ಶಿಸಿದರು.
ಕರ್ನಾಟಕ ರಾಜ್ಯದ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.
