ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಆದಂ ಆಯ್ಕೆ
27/02/2023

ಕುಶಾಲನಗರ,ಫೆ.27 : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕುಶಾಲನಗರದ ಎಸ್.ಆದಂ ಆಯ್ಕೆಯಾಗಿದ್ದಾರೆ.
ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಅಧ್ಯಕ್ಷರಾದ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ಮೂರ್ನಾಡುವಿನಲ್ಲಿ ನಡೆದ ಸಭೆಯಲ್ಲಿ ಆದಂ ಅವರನ್ನು ಸರ್ವ ಸದಸ್ಯರು ಆಯ್ಕೆ ಮಾಡಿದ್ದಾರೆ.
ಎಸ್.ಆದಂ ಅವರು ಕೊಡಗು ಕಬಡ್ಡಿ ಅಸೋಸಿಯೇಷನ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಕೊಡಗು ನೆಟ್ ಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ, ರಂಜಿತ್ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಇದರೊಂದಿಗೆ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾಗಿದ್ದಾರೆ. ಇವರಿಗೆ ಬಂಧು ಬಳಗ, ಸ್ನೇಹಿತರು ಹಾಗೂ ಕುಶಾಲನಗರದ ಜನತೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
