Advertisement
5:01 AM Friday 8-December 2023

ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಮೌರ್ಯ ಆಯ್ಕೆ

27/02/2023

ಮಡಿಕೇರಿ ಫೆ.27 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಮೌರ್ಯ ಆಯ್ಕೆಯಾಗಿದ್ದಾರೆ.
ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.
ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದ್ದಾರೆ.