Advertisement
3:07 AM Saturday 2-December 2023

ನಾನು ಪ್ರಬಲ ಆಕಾಂಕ್ಷಿ, ಯಾರು ಸ್ಪರ್ಧಿಸಿದರೂ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುವೆ

27/02/2023

ಮಡಿಕೇರಿ ಫೆ.27 : ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ, ಆದರೆ ಪಕ್ಷ ಯಾರಿಗೆ ಸ್ಪರ್ಧಿಸಲು ಅವಕಾಶ ನೀಡಿದರೂ ಶಿಸ್ತಿನ ಸಿಪಾಯಿಯಂತೆ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾನು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತೆಯಾಗಿ ಕಳೆದ 39 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಇದರ ಪರಿಣಾಮವಾಗಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ವಿಧಾನ ಪರಿಷತ್ ಗೂ ನನ್ನನ್ನು ಕಳುಹಿಸಿಕೊಡಲಾಗಿದೆ. ಪ್ರಸ್ತುತ ವಿಧಾನಸಭೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು.
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿರುವುದರಿಂದ ಯಾರೇ ಅಭ್ಯರ್ಥಿಯಾದರು ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.