ಮಡಿಕೇರಿ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳ ಕಿಟ್ ವಿತರಣೆ
27/02/2023

ಮಡಿಕೇರಿ ಫೆ.27 : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಸೋಮವಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸಲಾಯಿತು.
6 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಕಿಟ್ ಗಳನ್ನು, 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮಿಕ್ ಟ್ಯಾಬ್‍ಗಳನ್ನು ನೀಡಲಾಯಿತು. ಬಣ್ಣ ಬಳಿಯುವವರಿಗೆ, ಮರದ ಕೆಲಸಗಾರರಿಗೆ ಮತ್ತು ಪ್ಲಂಬರ್ ಗೆ ಸಂಬಂಧಪಟ್ಟ ಕಿಟ್ ಗಳನ್ನು ವಿತರಿಸಲಾಯಿತು.
ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಸರ್ಕಾರದ ಸೌಲಭ್ಯವನ್ನು ಅರ್ಹರಿಗೆ ನೀಡಿದರು.
