ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇತ್ರ ತಪಾಸಣೆ
28/02/2023

ಮಡಿಕೇರಿ ಫೆ.28 : ಪ್ರತಿ ಮನುಷ್ಯನಿಗೆ ನೇತ್ರ ಪ್ರಮುಖವಾಗಿದ್ದು, ಎಲ್ಲರೂ ನೇತ್ರ ಸಂರಕ್ಷಣೆಗೆ ಮುಂದಾಗಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ.ರೋಹಿತ್ ಹೇಳಿದರು.
ಪಟ್ಟಣದ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಕ್ಕಮಗಳೂರಿನ ಡೆಲ್ಟಾ ಕಣ್ಣಿನ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಆಫ್ ಸೋಮವಾರಪೇಟೆ ಆಶ್ರಯದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ವರ್ಷಕೊಮ್ಮೆಯಾದರೂ ನೇತ್ರ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕು ಎಂದರು.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಕೆ.ಎನ್.ತೇಜಸ್ವಿ, ಖಜಾಂಚಿ ಜಿ.ಟಿ.ಯೋಗೇಂದ್ರ, ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ನಿರ್ವಾಣಿ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಚಂದ್ರಾಜು, ಕಾರ್ಯದರ್ಶಿ ವೆಂಕಟೇಶ್, ಎ.ಎಸ್.ಮಹೇಶ್, ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮಿ, ಚಿಕ್ಕಮಗಳೂರಿನ ಡೆಲ್ಟಾ ಕಣ್ಣಿನ ಕೇಂದ್ರದ ಪ್ರಮುಖರಾದ ಜ್ಯೋತಿ ಹಾಜರಿದ್ದರು.
