Advertisement
9:31 AM Sunday 3-December 2023

16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ : ಸ್ವಾಗತ ಸಮಿತಿ ರಚನೆ

28/02/2023

ಮಡಿಕೇರಿ ಫೆ 28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತನ್ನ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆಸುತಿದೆ. ಮಾ4 ಮತ್ತು 5 ರಂದು ಗೋಣಿಕೊಪ್ಪಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸುವ ಸಾಹಿತಿ ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಸಾಹಿತಿಗಳು ಮೈಸೂರಿನ ಯುವರಾಜ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರು ಡಾ. ಎಂ.ಪಿ.ರೇಖಾ ಆಯ್ಕೆಯಾಗಿದ್ದು, ಸಮ್ಮೇಳನವನ್ನು ನಡೆಸಿಕೊಡಲಿದ್ದಾರೆ.
ಸಮ್ಮೇಳನದ ಯಶಸ್ಸಿಗಾಗಿ ಸ್ವಾಗತ ಸಮಿತಿ ರಚಿಸಲಾಗಿದ್ದು ಅದರೊಂದಿಗೆ ಹಲವಾರು ಉಪಸಮಿತಿಗಳನ್ನು ರಚಿಸಲಾಗಿದೆ.
ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು, ಸರಕಾರಿ ಭೂ ಅತಿಕ್ರಮ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಜಿ.ಬೋಪಯ್ಯ ಮತ್ತು ಗೌರವಾಧ್ಯಕ್ಷರಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹಾಗೂ ವಿಧಾನಪರಿಷತ್ ಸದಸ್ಯರಾದ ಎಂ.ಪಿ ಸುಜಾ ಕುಶಾಲಪ್ಪ ಕಾರ್ಯ ನಿರ್ವಹಿಸಲಿದ್ದಾರೆ.
ಮಹಾಪೋಷಕರುಗಳಾಗಿ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್, ಕೊಡಗು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಸ್ ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ರಾಮರಾಜನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಕಾರ್ಯ ನಿರ್ವಹಿಸಲಿದ್ದಾರೆ.
ಪೋಷಕರುಗಳಾಗಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರರಾದ ಪ್ರಶಾಂತ್, ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಪೊಲೀಸ್ ಉಪವಿಭಾಗಾಧಿಕಾರಿ ನಿರಂಜನ್ ರಾಜ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿಯದ ಶ್ರೀಶೈಲ ಬಿಳಗಿ, ಪೊನ್ನಂಪೇಟೆ ತಾಲೂಕು ಸಿ.ಡಿ.ಪಿ.ಓ ರಾಜೇಶ್ ಕೆ.ಆರ್, ಕೊಡಗು ಜಿಲ್ಲಾ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷರಾದ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯನಿರ್ವಹಿಸಲಿದ್ದಾರೆ
ಕಾರ್ಯಧ್ಯಕ್ಷರಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ. ಪಿ ಕೇಶವ ಕಾಮತ್ ಮಹಾಪ್ರದಾನ ಕಾರ್ಯದರ್ಶಿಯಾಗಿ ಪೊನ್ನಂಪೇಟೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಪ್ರಧಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್ ಮತ್ತು ರೇವತಿ ರಮೇಶ್, ಕೋಶಾಧಿಕಾರಿಗಳಾಗಿ ಪೊನ್ನಂಪೇಟೆ ಹೋಬಳಿ ಕ.ಸ.ಪಾ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಜಿಲ್ಲಾ ಗೌರವ ಕೋಶಾಧಿಕಾರಿ ಎಂ.ಬಿ.ಜೋಯಪ್ಪ. ಕಾರ್ಯನಿರ್ವಹಿಸಲಿದ್ದಾರೆ.
ಹಣಕಾಸು ಸಮಿತಿಯ ಅಧ್ಯಕ್ಷರಾಗಿ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಸಂಚಾಲಕರಾಗಿ ಬಿ.ಎನ್ ಪ್ರಕಾಶ್, ವೇದಿಕೆ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಟಿ.ಬಿ ಜೀವನ್, ಸಂಚಾಲಕರಾಗಿ ವಿ.ಬಿ ರುದ್ರಪ್ಪ, ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಶೀಲಾ ಬೋಪಣ್ಣ, ಸಂಚಾಲಕರಾಗಿ ಟಿ. ಕೆ ವಾಮನ, ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ಎಂ.ಎನ್. ಪ್ರಕಾಶ್, ಸಂಚಾಲಕರಾಗಿ ಡಾಡು ಜೋಸೆಫ್ ಮತ್ತು ಕಂದಾದೇವಯ್ಯ, ಅಲಂಕಾರ ಸಮಿತಿ ಅಧ್ಯಕ್ಷರಾಗಿ ಕುಲ್ಲಚಂಡ ಬೋಪಣ್ಣ, ಸಂಚಾಲಕರಾಗಿ ಅಬ್ದುಲ್ ಬೇಗ್, ಆಹಾರ ಸಮಿತಿ ಅಧ್ಯಕ್ಷರಾಗಿ ಶರತ್ ಕಾಂತ್, ಸಂಚಾಲಕರಾಗಿ ಲಕ್ಷ್ಮಿ ರೆಡ್ಡಿ, ಸ್ಮರಣ ಸಂಚಿಕೆಯ ಸಂಪಾದಕರಾಗಿ ಜಗದೀಶ್ ಜೋಡುಬೀಟಿ, ಉಪಸಂಪಾದಕರಾಗಿ ರಜನಿ ಎಸ್, ಆರೋಗ್ಯ ಸಮಿತಿ ಅಧ್ಯಕ್ಷರಾಗಿ ಡಾ.ಯತಿರಾಜ್, ಸಂಚಾಲಕರಾಗಿ ಮಧು ಕುಮಾರ್, ಸಾಂಸ್ಕøತಿಕ ಸಮಿತಿಯ ಅಧ್ಯಕ್ಷರಾಗಿ ಚಂದನ ಡಿ.ಮಂಜುನಾಥ್, ಸಂಚಾಲಕರಾಗಿ ಕೆ.ವಿ ರಾಮಕೃಷ್ಣ, ಶಿಸ್ತು ಸಮಿತಿಯ ಅಧ್ಯಕ್ಷರಾಗಿ ಕೊಣಿಯಂಡ ಬೋಜಮ್ಮ ಉತ್ತಪ್ಪ, ಸಂಚಾಲಕರಾಗಿ ತಾತಿರ ಅಜಿತ್ ಗಣಪತಿ, ನೈರ್ಮಲ್ಯ ಸಮಿತಿಯ ಅಧ್ಯಕ್ಷರಾಗಿ ಪಿ.ವಿ.ಶ್ರೀನಿವಾಸ್, ಸಂಚಾಲಕರಾಗಿ ಕೆ.ರಾಜೇಶ್, ಧ್ವಜ ಸಿದ್ಧತಾ ಸಮಿತಿಯ ಅಧ್ಯಕ್ಷರಾಗಿ ಟಿ.ಎಸ್ ಮಹೇಶ್, ಸಂಚಾಲಕರಾಗಿ ಟಿ.ಡಿ ರಮಾನಂದ ಅವರು ಕಾರ್ಯನಿರ್ವಹಿಸಲಿದ್ದು, ಎಲ್ಲ ಸಮಿತಿಗಳಲ್ಲಿ ಗೋಣಿಕೊಪ್ಪಲು ಪೊನ್ನಂಪೇಟೆ ಸುತ್ತಮುತ್ತಲ ಕನ್ನಡ ಅಭಿಮಾನಿಗಳು ಇನ್ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಸದಸ್ಯರಾಗಿ ಮತ್ತು ಸ್ವಯಂಸೇವಕರಾಗಿ ಕನ್ನಡದ ಈ ನುಡಿ ಹಬ್ಬವನ್ನು ಯಶಸ್ವಿಗೊಳಿಸಲು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಹಾ ಪ್ರದಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.