Advertisement
10:59 AM Monday 4-December 2023

7ನೇ ವೇತನ ಆಯೋಗ ವರದಿ ಜಾರಿಗೆ ಮಧ್ಯಂತರ ವರದಿ ಪಡೆದು ಅನುಷ್ಠಾನ: ಸಿಎಂ ಬೊಮ್ಮಾಯಿ

28/02/2023

ಹುಬ್ಬಳ್ಳಿ ಫೆ.28 : 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು  ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾಳೆಯಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲು ಆರಂಭಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ನಾವು ಕೂಡಲೇ 7 ನೇ ಆಯೋಗಕ್ಕೆ ಸೂಚನೆ ನೀಡಿ ಮಧ್ಯಂತರ ವರದಿ ಪಡೆದು ಅದರ ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು. ಸಿ.ಎ.ಆರ್ ಸಿಬ್ಬಂದಿ ಬಲ ಪಡಿಸುವ ಬಗ್ಗೆ ಡಿ.ಜಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.