ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಜಯ
28/02/2023

ಮಡಿಕೇರಿ ಫೆ.28 : ದಕ್ಷಿಣ ಕೊಡಗಿನ ಎರಡು ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ.
ನಿಟ್ಟೂರು ಗ್ರಾ.ಪಂ ನಲ್ಲಿ ಅಪ್ಪಣ್ಣ ಹಾಗೂ ಗೋಣಿಕೊಪ್ಪಲು ಗ್ರಾ.ಪಂ ನಲ್ಲಿ ಸಫೂರಬಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಿ ಗೆಲುವು ದಾಖಲಿಸಿದರು.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ ಹಿನ್ನೆಲೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪಲಿನಲ್ಲಿ ವಿಜಯೋತ್ಸವ ಆಚರಿಸಿದರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಹಾಗೂ ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ ನೇತೃತ್ವದಲ್ಲಿ ವಿಜಯೋತ್ಸವ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
