ಸರ್ಕಾರಿ ನೌಕರರ ಮುಷ್ಕರ : ಶೇ.17ರಷ್ಟು ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ
01/03/2023

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ.
ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು.
