Advertisement
2:21 AM Thursday 7-December 2023

ಸೋಮವಾರಪೇಟೆ ಬಿಜೆಪಿ ಕಾರ್ಯಕರ್ತರ ಮಿಲನ ಕಾರ್ಯಕ್ರಮ : ಜಯಭೇರಿಯ ವಿಶ್ವಾಸ ವ್ಯಕ್ತಪಡಿಸಿದ ಶಾಸಕದ್ವಯರು

01/03/2023

ಮಡಿಕೇರಿ ಮಾ.1 : ಮುಂದಿನ ಅವಧಿಗೂ ಕೇಂದ್ರ ಹಾಗೂ ರಾಜ್ಯ ದಲ್ಲಿ ಡಬ್ಬಲ್ ಇಂಜಿನ್ ಸರ್ಕಾರ ಖಚಿತ ಎಂದು  ಶಾಸಕದ್ವಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್  ಅವರ ಮನೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮಿಲನ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಮೇ ಮೊದಲವಾರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಕ್ರಮಗಳೇ ಪಕ್ಷಕ್ಕೆ ಶ್ರೀ ರಕ್ಷೆ. ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ ಎಂದರು.

ಈ ಸಂದರ್ಭ ವಿಧಾನ ಪರಿಷತ್ತು ಸದಸ್ಯ ಸುಜಾಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.