Advertisement
3:58 AM Friday 8-December 2023

ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಪಲ್ಟಿ

02/03/2023

ನಾಪೋಕ್ಲು ಮಾ.2 : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಕ್ಕಬ್ಬೆ ನಿವಾಸಿ ಸರಸ್ವತಿ (65) ಎಂಬುವವರು ಮೃತ ದುರ್ದೈವಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಇವರನ್ನು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಳಕೇರಿ- ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಪೋಕ್ಲು ಮತ್ತು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದರು. (ವರದಿ : ದುಗ್ಗಳ ಸದಾನಂದ)