ಮಡಿಕೇರಿ : ಮಹಾತ್ಮ ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆ
02/03/2023

ಮಡಿಕೇರಿ ಮಾ.2 : ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ಸರ್ವೆ ನಂ.471/1 ರಲ್ಲಿ 0.12 ಎಕರೆ ಮತ್ತು ಸರ್ವೆ ನಂ.471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೆಯಿಂದ ಗುರುತಿಸಿದ ನಕಾಶೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ರೂ.50 ಲಕ್ಷ ವನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ.
ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ರೂ.50 ಲಕ್ಷ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
